ವರ್ಗಾವಣೆ ದಂಧೆಗೆ ಬಿಎಸ್‌ವೈ ದಾಖಲೆ ಕೊಡಲಿ

Team Udayavani, Aug 7, 2018, 12:03 PM IST

bsy.jpg

ಬೆಂಗಳೂರು: ವಿಧಾನಸೌಧದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸೂಕ್ತ ದಾಖಲೆ ಕೊಡಲಿ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಇಲಾಖೆಯಲ್ಲಿ ಯಾವುದೇ ಹಣ ಪಡೆದು ವರ್ಗಾವಣೆ ನಡೆಸಿದಿಲ್ಲ. ಎಲ್ಲವೂ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಲಾಗಿದೆ. ಯಡಿಯೂರಪ್ಪ ಬಳಿ ಹಣ ಪಡೆದು ವರ್ಗಾವಣೆ ಮಾಡಿರುವ ಬಗ್ಗೆ ದಾಖಲೆ ಇದ್ದರೆ ನೀಡಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಉತ್ತರ ಕರ್ನಾಟಕ ಭಾಗದ ಯಾವ ಜಿಲ್ಲೆಗೆ, ತಾಲೂಕಿಗೆ ಅನ್ಯಾಯವಾಗಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಲಿ. ಸರ್ಕಾರ ಅದನ್ನು ಸರಿಪಡಿಸುವ ಕೆಲಸ ಮಾಡುತ್ತದೆ. ಇದರಲ್ಲಿ ಬಿಜೆಪಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ನಾನು ಕೇವಲ ಜೆಡಿಎಸ್‌ ಕಾಂಗ್ರೆಸ್‌ಗೆ ಸಚಿವನಲ್ಲ ಎಲ್ಲ ಜನರ ಮಂತ್ರಿ. ಜನರು ನಮಗೆ ಮತ ಹಾಕಿಲ್ಲ ಎಂದು ಸುಮ್ಮನಿರಲು ಆಗುತ್ತದೆಯೇ ಎಂದು ಪ್ರಶ್ನಿಸಿದರು. 

ಹಿಂದಿನ ಲೋಕೋಪಯೋಗಿ ಸಚಿವ ಮಹದೇವಪ್ಪ ಕೇಂದ್ರದಿಂದ ಹಣ ಬಿಡುಗಡೆಯಾಗದ ಕಾರಣ ಕೆಲವು ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಆದೇಶ ಮಾಡಿದ್ದಾರೆ. ಸಿಆರ್‌ಎಫ್ ಯೋಜನೆಯಲ್ಲಿ 1 ಸಾವಿರ ಕೋಟಿ ರೂ. ಬಿಲ್‌ ಬಾಕಿ ಇದೆ. ಕೇಂದ್ರ ಸರ್ಕಾರ 500 ಕೋಟಿ ರೂಪಾಯಿ ಮಾತ್ರ ಕೊಡುತ್ತದೆ. ಹೀಗಾಗಿ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಗುತ್ತಿಲ್ಲ ಎಂದು ಹೇಳಿದರು.

ಕೋಲಾರ ಹಾಲು ಒಕ್ಕೂಟದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಆರೋಪವನ್ನು ತಳ್ಳಿ ಹಾಕಿರುವ ಅವರು, ನಾನು ಯಾವುದೇ ಒತ್ತಡ ಹಾಕಿಲ್ಲ. ಈ ಬಗ್ಗೆ ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯಿಲಿ ಅವರೊಂದಿಗೆ ಮಾತನಾಡಿದ್ದೇನೆ. ಸೈನಿಕರಿಗೆ ಹಾಲು ಕಳುಹಿಸಲು 10 ಲಕ್ಷ ಲೀಟರ್‌ ಮೇಲೆ ಹಾಲು ಉತ್ಪಾದಿಸುವ ಒಕ್ಕೂಟಗಳ ನಡುವೆ ಟೆಂಡರ್‌ ಕರೆಯಲಾಗುತ್ತದೆ.

ಹಾಸನ ಒಕ್ಕೂಟ 10 ಲಕ್ಷ ಲೀಟರ್‌ಗೂ ಅಧಿಕ ಹಾಲು ಉತ್ಪಾದನೆ ಮಾಡುತ್ತದೆ. ಹೀಗಾಗಿ ಹಾಸನ ಹಾಲು ಒಕ್ಕೂಟ ಟೆಂಡರ್‌ನಲ್ಲಿ ಪಾಲ್ಗೊಂಡು ಹಾಲು ಸರಬರಾಜಿಗೆ ಅವಕಾಶ ಪಡೆಯುತ್ತದೆ. ನಮಗೆ ಹಾಸನ, ಕೋಲಾರ, ಬೆಂಗಳೂರು ಎಂಬ ತಾರತಮ್ಯ ಇಲ್ಲ ಎಂದು ಹೇಳಿದರು.

ನನ್ನ ಮಗ ಯಾರ ಮೇಲೂ ಹಲ್ಲೆ ಮಾಡಿಲ್ಲ. ಕೆಲವರು ನನ್ನ ಮಗನ ಮೇಲೆ ಹಲ್ಲೆ ಮಾಡಿದ್ದಾರೆ. ಆತ ಎಲ್ಲಿಯೂ ಹೇಳಿಲ್ಲ. ಈ ಸಂಬಂಧ ಇನ್ಸ್‌ಪೆಕ್ಟರ್‌ ಅಮಾನತು ಮಾಡುವುದರಿಂದ ನನಗೇನು ಆಗುವುದಿದೆ. ನನ್ನ ಮಗ ತಪ್ಪು ಮಾಡಿದರೆ ತನಿಖೆ ನಡೆಸಲಿ. ನಾನು ಇದುವರೆಗೂ ಯಾರನ್ನೂ ವರ್ಗ ಮಾಡಿಲ್ಲ. ನನಗೆ ಯಾರ ಮೇಲೂ ದ್ವೇಷ ಇಲ್ಲ.
-ಎಚ್‌.ಡಿ.ರೇವಣ್ಣ  

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.