CONNECT WITH US  

3 ಪ್ರತ್ಯೇಕ ತಂಡವಾಗಿ ಬಿಜೆಪಿ ಪ್ರವಾಸ 

ನಗರ ಸ್ಥಳೀಯ ಸಂಸ್ಥೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಯಕರಿಂದ ಜನಜಾಗೃತಿ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಸರ್ಕಾರದ ವೈಫ‌ಲ್ಯಗಳ ವಿರುದಟಛಿ ಜನಜಾಗೃತಿ ಮೂಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹಾಗೂ ಹಿರಿಯ ಮುಖಂಡ ಕೆ.ಎಸ್‌.ಈಶ್ವರಪ್ಪ ನೇತೃತ್ವದಲ್ಲಿ ಮೂರು ತಂಡಗಳು ಆ.9ರಿಂದ 16ರವರೆಗೆ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ತಿಳಿಸಿದ್ದಾರೆ‌.

ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ರಾಜ್ಯ ಪ್ರವಾಸದಲ್ಲಿ ಜಿಲ್ಲಾವಾರು (ಲೋಕಸಭಾ ಕ್ಷೇತ್ರವಾರು) ಸಂಸದರು, ಶಾಸಕರು ಸೇರಿ ಜಿಲ್ಲಾ ಕೋರ್‌ ಕಮಿಟಿ ಸಭೆ, ಜಿಲ್ಲಾ ಶಕ್ತಿ ಕೇಂದ್ರ ಪ್ರಮುಖರ ಮೇಲ್ಮಟ್ಟವರ ಸಭೆ ನಡೆಯಲಿದೆ.
ಯಡಿಯೂರಪ್ಪ ನೇತೃತ್ವದ ತಂಡ ಆ.9ರಿಂದ 16ರವರೆಗೆ ಬೀದರ್‌, ಕಲಬುರಗಿ, ಬೆಂಗಳೂರು ಮಹಾನಗರ, ಬೆಂಗಳೂರು ನಗರ ಜಿಲ್ಲೆ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ತಿಳಿಸಿದರು.

ಜಗದೀಶ ಶೆಟ್ಟರ್‌ ನೇತೃತ್ವದ ತಂಡ ಆ.9ರಿಂದ 13ರವರೆಗೆ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮಹಾನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರದಲ್ಲಿ ಪ್ರವಾಸ ನಡೆಸಲಿದೆ. ಕೆ.ಎಸ್‌.ಈಶ್ವರಪ್ಪ ನೇತೃತ್ವದ ತಂಡ ಆ.9ರಿಂದ 12ರವರೆಗೆ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ದೃಷ್ಟಿಯಿಂದ ರೂಪು ಗೊಂಡಿದ್ದ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ ನೀಡುವ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕೃತವಾಗಿರುವುದು ಶ್ಲಾಘನೀಯ. ಇದಕ್ಕಾಗಿ ಪ್ರಧಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು, ಸಂಸದರು, ರಾಜ್ಯಸಭಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಗುವುದು.
● ಎನ್‌.ರವಿಕುಮಾರ್‌, ವಿಧಾನಪರಿಷತ್‌ ಸದಸ್ಯ

ರಾಜ್ಯದ ಸಮ್ಮಿಶ್ರ ಸರಕಾರ ಒಂದೋ ಹೊಟ್ಟೆ ತುಂಬುವವರೆಗೆ ಇಲ್ಲಾ, ಹಿಟ್ಟು ಖಾಲಿಯಾಗುವವರೆಗೆ ಇರಬಹುದು. ಆದರೆ ಒಂದಂತೂ ಸ್ಪಷ್ಟ. ಸರ್ಕಾರ ಅದಾಗೇ ಬೀಳುವವರೆಗೂ ನಾವು ಕಾಯುತ್ತೇವೆ. ಸರ್ಕಾರ ಬೀಳಿಸುವ ಕೆಲಸಕ್ಕೆ ಕೈ ಹಾಕುವುದಿಲ್ಲ. 
● ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ


Trending videos

Back to Top