CONNECT WITH US  

ಆಪರೇಷನ್‌ ಕಮಲ ಮಾಡುತ್ತಿಲ್ಲ

ರಾಯಚೂರು: ಶಾಸಕ ಎಂ.ಬಿ.ಪಾಟೀಲ ಜತೆ ಒಂದೇ ವಿಮಾನದಲ್ಲಿ ಪ್ರಯಾಣ ಮಾಡಿದ್ದರೂ ರಾಜಕೀಯ ಚರ್ಚೆ ಮಾಡಿಲ್ಲ. ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ
ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನಾನು ಬಾದಾಮಿ ಕ್ಷೇತ್ರದಲ್ಲಿ ಕೇವಲ ಅರ್ಧ ದಿನ ಪ್ರಚಾರ ಮಾಡಿದ್ದರೂ ಸಿದ್ದರಾಮಯ್ಯ ಸೋತು ಮನೆ ಸೇರುತ್ತಿದ್ದರು. ಈಗ ಮಾಜಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಯನ್ನು ಅಭಿವೃದಿಟಛಿ ಮಾಡಲು ಸರ್ಕಾರಕ್ಕೆ ಪತ್ರ ಬರೆಯುವಂತಾಗಿದೆ. ಆದರೂ, ಅವರಿಂದ ಯಾವುದೇ ಸೌಲಭ್ಯ ಕಲ್ಪಿಸಲು ಆಗುತ್ತಿಲ್ಲ. ಶಾಸಕ ಶ್ರೀರಾಮುಲು ಬಾದಾಮಿ ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಿದ್ದರೆ ಸಿದ್ದರಾಮಯ್ಯ ಖಚಿತವಾಗಿ ಸೋಲುತ್ತಿದ್ದರು' ಎಂದರು.

"ಸಾಲ ಮನ್ನಾ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ದಿನಕ್ಕೊಂದು ಹೇಳಿಕೆನೀಡುತ್ತಿದ್ದಾರೆ. ಸಾಲ ಮನ್ನಾ ಮಾಡುತ್ತೇನೆ ಎಂದರೆ ಸಾಲದು ಕೂಡಲೇ ಬ್ಯಾಂಕ್‌ಗಳಿಗೆ ಹಣ ಪಾವತಿಸಬೇಕು. ರಾಜ್ಯದಲ್ಲಿ ಕೆಲ ಜಿಲ್ಲೆಗಳು ಭೀಕರ ಬರ ಎದುರಿಸುತ್ತಿವೆ. ಆದರೆ,ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ.ಜಿಲ್ಲೆಯನ್ನು ಬರ ಎಂದು ಘೋಷಿಸಬೇಕು. 13
ಜಿಲ್ಲೆಗಳು ಬರಕ್ಕೆ ತುತ್ತಾಗಿದ್ದರೂ ಮುಖ್ಯಮಂತ್ರಿ ಈ ಭಾಗಕ್ಕೆ ಭೇಟಿ ನೀಡಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಿಲ್ಲ' ಎಂದರು.

ರಾಜ್ಯದಲ್ಲಿ ಮಳೆ ಇಲ್ಲದೆ ಬರ ಆವರಿಸಿದೆ. ರೈತರು ಆತ್ಮಹತ್ಯೆ ದಾರಿ ಹಿಡಿದಿದ್ದಾರೆ.ಇಂತಹ ಹೊತ್ತಲ್ಲಿ ನೆರವಿಗೆ ಧಾವಿಸ
ಬೇಕಿದ್ದ ಸಮ್ಮಿಶ್ರ ಸರ್ಕಾರ ಬದುಕಿದೆಯೋ, ಸತ್ತಿದೆಯೋ?ಗೊತ್ತಿಲ್ಲ. ಸರ್ಕಾರ ಬರ ಘೋಷಣೆಗೆ ಮುಂದಾಗದಿದ್ದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿರುವ ನಾವು ಸುಮ್ಮನೆ ಕೂರುವುದಿಲ್ಲ. ದೊಡ್ಡಮಟ್ಟದ ಹೋರಾಟ ಮಾಡುತ್ತೇವೆ.

- ಬಿ.ಎಸ್‌. ಯಡಿಯೂರಪ್ಪ,
ಪ್ರತಿಪಕ್ಷ ನಾಯಕ

Trending videos

Back to Top