CONNECT WITH US  

ಕಾಂಗ್ರೆಸ್ ಪಕ್ಷದ 70 ವರ್ಷದ ಸಾಧನೆ ಫಲ BJP ಅನುಭವಿಸುತ್ತಿದೆ; ಖರ್ಗೆ

ಬೀದರ್: ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಏನು ಮಾಡಿದೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ. ಆದರೆ ಕಾಂಗ್ರೆಸ್ ಪಕ್ಷ 70 ವರ್ಷದಲ್ಲಿ ಮಾಡಿದ ಸಾಧನೆಯ ಫಲವನ್ನು ಈಗ ಬಿಜೆಪಿ ಅನುಭವಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸೋಮವಾರ ಬೀದರ್ ನಲ್ಲಿ ಹಮ್ಮಿಕೊಂಡಿದ್ದ ಜನಧ್ವನಿ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಮಾತಿಗೆ ಯಾರೂ ಮರುಳಾಗಬೇಡಿ. ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದ್ರೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.

ದೇಶದಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎಂಬ ಬಿಜೆಪಿ ಕನಸು ನನಸಾಗುವುದಿಲ್ಲ.ನರೇಂದ್ರ ಮೋದಿ ಅವರ ಸುಳ್ಳನ್ನು ದೇಶದ ಜನತೆ ನಂಬುವುದಿಲ್ಲ ಎಂದರು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಣಕಹಳೆ ಮೊಳಗಿಸುವ ನಿಟ್ಟಿನಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ ಜನಧ್ವನಿ ಕಾರ್ಯಕ್ರಮ ನಡೆಸಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯದರ್ಶಿ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top