ಕಳಪೆ ಶೂ, ಸಾಕ್ಸ್: 15 ದಿನಗಳಲ್ಲಿ ವರದಿಗೆ ಆದೇಶ
Team Udayavani, Aug 15, 2018, 6:00 AM IST
ಬೆಂಗಳೂರು: ಸರಕಾರಿ ಶಾಲಾ ಮಕ್ಕಳಿಗೆ ವಿತರಿಸಿರುವ ಶೂ, ಸಾಕ್ಸ್ ಗಳ ಗುಣಮಟ್ಟವನ್ನು ಸೂಕ್ಷ್ಮವಾಗಿ ಪರಿಶೀಲಿಸಿ, 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಆದೇಶಿಸಿದ್ದಾರೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಮೂಲಕ ಸರಕಾರಿ ಶಾಲಾ ಮಕ್ಕಳಿಗೆ ನೀಡಿರುವ ಶೂ ಮತ್ತು ಸಾಕ್ಸ್ನ ಗುಣಮಟ್ಟ ತೀರಾ ಕಳಪೆಯಾಗಿರುವ ಕುರಿತು “ಉದಯವಾಣಿ’ ಜು. 25ರಂದು “ಮಕ್ಕಳು ಬಳಸದಂತಿವೆ ಸರಕಾರಿ ಶೂ, ಸಾಕ್ಸ್!’ ಎಂಬ ಶೀರ್ಷಿಕೆ ಯಡಿ ವರದಿ
ಪ್ರಕಟಿಸಿತ್ತು.
ಅದರಂತೆ ಸಚಿವರು, ಕಳೆದ ವಾರ ಕೊಳ್ಳೇಗಾಲ ತಾಲೂಕು ಕೇಂದ್ರದ ಸರಕಾರಿ ಶಾಲೆಗೆ ಭೇಟಿ ನೀಡಿ ಮಕ್ಕಳ ಶೂ, ಸಾಕ್ಸ್ ಗುಣಮಟ್ಟವನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದ್ದರು. ಮಕ್ಕಳಿಗೆ ನಿರ್ದಿಷ್ಟ ಕಂಪೆನಿಯ ಎರಡನೇ ದರ್ಜೆಯ ಶೂ, ಸಾಕ್ಸ್ ವಿತರಿಸಿರುವುದು ಬಹಿರಂಗಗೊಂಡಿತ್ತು. ಅನಂತರ ಬೆಂಗಳೂರಿನಲ್ಲಿ ಇಲಾಖೆಯ ಆಯುಕ್ತರು ಹಾಗೂ ಪ್ರಧಾನ ಕಾರ್ಯ ದರ್ಶಿಗಳ ಸಹಿತವಾಗಿ ಅಧಿಕಾರಿಗಳ ಸಭೆ ನಡೆಸಿ, ಶೂ, ಸಾಕ್ಸ್ ವಿತರಣೆಯ ಎಲ್ಲ ಮಾಹಿತಿ ಪಡೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ