CONNECT WITH US  

ವಾಹನ ಸವಾರರೇ ಗಮನಿಸಿ; 5 ದಿನಗಳ ಕಾಲ ಶಿರಾಡಿಘಾಟ್ ಬಂದ್

ಹಾಸನ: ಮಲೆನಾಡು ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿರಾಡಿಘಾಟ್ ನಲ್ಲಿ ಐದು ದಿನಗಳ ಕಾಲ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ ಎಂದು ಸಕಲೇಶಪುರ ಉಪವಿಭಾಗಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ಶಿರಾಡಿಘಾಟ್ ನ ಹಲವೆಡೆ ಗುಡ್ಡ ಕುಸಿಯುತ್ತಿದೆ. ಮಂಗಳವಾರ ರಾತ್ರಿ ಟ್ಯಾಂಕರ್ ಪಲ್ಟಿಯಾಗಿ ಬಿದ್ದು ಮೂವರು ಮಂದಿ ಸಾವಿಗೀಡಾಗಿದ್ದರು. ಅಲ್ಲದೇ ಗುಡ್ಡ ಕುಸಿತದಿಂದ ಕೆಲವು ಬಸ್ ಗಳು ಕೂಡಾ ಜಖಂಗೊಂಡಿದ್ದವು.

ಇಂದಿನಿಂದ ಆಗಸ್ಟ್ 20ರವರೆಗೆ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಹೇಳಿದರು. ಆಗಸ್ಟ್ 25ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇತ್ತೀಚೆಗಷ್ಟೇ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ನ ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡು ವಾಹನ ಸಂಚಾರಕ್ಕೆ ಮುಕ್ತವಾಗಿತ್ತು.


Trending videos

Back to Top