ಅಜಾತ ಶತ್ರು ಅಮರ : ರಾಜ್ಯದಲ್ಲಿ ನಾಳೆ ಸರಕಾರಿ ರಜೆ ಘೋಷಣೆ
Team Udayavani, Aug 16, 2018, 8:37 PM IST
ಬೆಂಗಳೂರು: ಮಾಜೀ ಪ್ರಧಾನಿ ಹಾಗೂ ಭಾರತೀಯ ಜನತಾ ಪಕ್ಷದ ನೇತಾರ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನದ ಪ್ರಯುಕ್ತ ನಾಳೆ ರಾಜ್ಯಾದ್ಯಂತ ಸರಕಾರಿ ರಜೆಯನ್ನು ಘೋಷಿಸಲಾಗಿದೆ. ಇನ್ನು ಕೇಂದ್ರ ಸರಕಾರದ ಇಲಾಖಾ ಕಛೇರಿಗಳಿಗೆ ನಾಳೆ ಅರ್ಧ ದಿನ ರಜೆ ಘೋಷಿಸಲಾಗಿದೆ.
ಇದಕ್ಕೂ ಮುಂಚೆ ರಾಜ್ಯದಲ್ಲಿ ಕೇವಲ ಶೋಕಾಚರಣೆ ನಡೆಸಲು ಮಾತ್ರವೇ ನಿರ್ಧರಿಸಲಾಗಿತ್ತು ಆದರೆ ಬಳಿಕ ತನ್ನ ನಿರ್ಧಾರವನ್ನು ಪರಿಷ್ಕರಿಸಿದ ರಾಜ್ಯ ಸರಕಾರವು ಶುಕ್ರವಾರದಂದು ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶವನ್ನು ಹೊರಡಿಸಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದಂತೆ ಈ ಆದೇಶವನ್ನು ಹೊರಡಿಸಲಾಗಿದೆ ಎಂಬ ಮಾಹಿತಿಯನ್ನು ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಅವರು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಸರಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸುವಂತೆಯೂ ಸಹ ರಾಜ್ಯ ಸರಕಾರ ಆದೇಶವನ್ನು ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ