ಅಗ್ಗದ ದರದಲ್ಲಿ ರೇಷ್ಮೆ ಸೀರೆ ಸಿಗುವುದು ಡೌಟು
Team Udayavani, Aug 18, 2018, 6:45 AM IST
ಮೈಸೂರು: ವರ ಮಹಾಲಕ್ಷ್ಮೀ ಹಬ್ಬಕ್ಕೆ ಹೆಂಗಳೆಯರಿಗೆ ರಿಯಾಯಿತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನೀತಿ ಸಂಹಿತೆ ಜಾರಿಯಿಂದ ಹಿನ್ನಡೆ ಉಂಟಾಗಿದೆ.
ಒಮ್ಮೆಯಾದರೂ ಮೈಸೂರು ಸಿಲ್ಕ್ ಸೀರೆ ಖರೀದಿಸಿ ತೊಡಬೇಕು ಎಂಬ ಹೆಂಗಳೆಯರ ಆಸೆಗೆ ಪೂರಕವಾಗಿ ಸಮ್ಮಿಶ್ರ ಸರ್ಕಾರದ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ಮಹಾಲಕ್ಷ್ಮೀ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಅದರಲ್ಲೂ ಕೇವಲ 4,500 ರೂ.ಗೆ ಮೈಸೂರು ರೇಷ್ಮೆ ನೀಡುವುದಾಗಿ ತಿಂಗಳ ಹಿಂದೆ ಪ್ರಕಟಿಸಿದ್ದರು.
ಸ್ವಾತಂತ್ರ್ಯ ದಿನಾಚರಣೆಗೂ ರಿಯಾಯಿತಿ ದರದಲ್ಲಿ ಮೈಸೂರು ರೇಷ್ಮೆ ಸೀರೆ ಮಾರಾಟ ಮಾಡಲು ರೇಷ್ಮೆ ಸಚಿವರು ಉತ್ಸುಕರಾಗಿದ್ದರು. ಅದರಂತೆ ಪ್ರಕಟಣೆ ನೀಡಲಾಗಿತ್ತು. ಆದರೆ, ಏಕಾಏಕಿ ರಿಯಾಯಿತಿ ದರದ ಸೀರೆ ಮಾರಾಟ ಮುಂದೂಡಿದ್ದರಿಂದ ಕೆಎಸ್ಐಸಿ ಮಳಿಗೆಗಳಿಗೆ ತೆರಳಿದ್ದ ಮಹಿಳೆಯರು ಸರ್ಕಾರದ ತೀರ್ಮಾನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು.
ಇದೀಗ ವರ ಮಹಾಲಕ್ಷ್ಮೀ ಹಬ್ಬಕ್ಕೆ ಮೂರು ದಿನ ಮುಂಚೆ ಆ.21ರಂದು ಚನ್ನಪಟ್ಟಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಿಯಾಯಿತಿ ದರದ ಮೈಸೂರು ರೇಷ್ಮೆ ಸೀರೆ ಮಾರಾಟಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದೆ. ಆದರೂ ಅಧಿಕೃತವಾಗಿ ಇನ್ನೂ ಕಾರ್ಯಕ್ರಮ ನಿಗದಿ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ