CONNECT WITH US  

ಇನ್ನು ನಾಲ್ಕೈದು ತಿಂಗಳು ಶಿರಾಡಿ ಘಾಟ್‌ನಲ್ಲಿ ಸಂಚಾರ ಸಾಧ್ಯವಿಲ್ಲ!

ಹಾಸನ: ಇನ್ನು ನಾಲ್ಕರಿಂದ ಐದು ತಿಂಗಳ ಕಾಲ ಶಿರಾಡಿ ಘಾಟ್‌ನಲ್ಲಿ ಸಂಚಾರ ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರು ಮಾಹಿತಿ ನೀಡಿದ್ದಾರೆ. 

ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೇವಣ್ಣ  ಘಾಟ್‌ನಲ್ಲಿ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವ ವರೆಗೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ಮುಗಿದ ಬಳಿಕ ಪರಿಶೀಲನೆ ನಡೆಸಿ ವರದಿ ನೀಡಿದ ಬಳಿಕವಷ್ಟೇ ವಾಹನಗಳ ಸಂಚಾರಕ್ಕೆ ತೆರವು ಮಾಡಲಾಗುವುದು ಎಂದು ತಿಳಿಸಿದ್ದಾರೆ. 

3 ದಿನಗಳ ಹಿಂದೆ ಶಿರಾಡಿಘಾಟ್‌ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾದ ಕಾರಣ  ಆ.25ರ ಬೆಳಗ್ಗೆ 6 ಗಂಟೆವರೆಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿತ್ತು. 


Trending videos

Back to Top