ಕೊಡಗಿಗೆ ಎಲ್ಲಾ ರೀತಿಯ ನೆರವು


Team Udayavani, Aug 20, 2018, 6:00 AM IST

narendra-modi-s-800.jpg

ಬೆಂಗಳೂರು: ಕೊಡಗಿನಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಕುರಿತು ರಾಷ್ಟ್ರಪತಿ
ರಾಮನಾಥ ಕೋವಿಂದ್‌ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಂದ
ಮಾಹಿತಿ ಪಡೆದಿದ್ದಾರೆ.

ಭಾನುವಾರ ಮುಖ್ಯಮಂತ್ರಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ರಾಷ್ಟ್ರಪತಿ ಮತ್ತು ಪ್ರಧಾನಿ, ಪರಿಸ್ಥಿತಿ ಬಗ್ಗೆ
ವಿವರ ಕೇಳಿದರು. ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲು ಸಿದಟಛಿವಿದೆ ಎಂದು ಭರವಸೆ ನೀಡಿದರು.

ನಿರಂತರ ಮಳೆ ಹಾಗೂ ಭೂಕುಸಿತದಿಂದ ಕೊಡಗಿನಲ್ಲಿ ಅಪಾರ ಹಾನಿಯಾಗಿದೆ. 6 ಮಂದಿ ಜೀವ ಕಳೆದುಕೊಂಡಿದ್ದು, 3,500 ಮಂದಿಯನ್ನು ಅಪಾಯದಿಂದ ರಕ್ಷಿಸಲಾಗಿದೆ. ಶನಿವಾರದಿಂದೀಚೆಗೆ ಎರಡು ತಿಂಗಳ ಮಗು ಸೇರಿದಂತೆ 317 ಜನರನ್ನು ಮಳೆ ಹಾನಿ ಪ್ರದೇಶದಿಂದ ರಕ್ಷಿಸಿ, ನಿರಾಶ್ರಿತರ ಕೇಂದ್ರಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ. ಆಹಾರ ಮತ್ತು ಅಗತ್ಯ ವಸ್ತುಗಳ ವ್ಯವಸ್ಥೆ ಮಾಡಲಾಗಿದೆ. ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ನಾಗರಿಕ ರಕ್ಷಣಾ ತಂಡ, ಅಗ್ನಿಶಾಮಕ ದಳ ಹಾಗೂ ತುರ್ತು ಸೇವಾ ಘಟಕದ ಸಾವಿರಕ್ಕೂ ಅಧಿಕ ಮಂದಿ ಆ.15 ರಿಂದಲೇ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. 

ಸ್ಥಳೀಯ ಯುವಕರು ಮತ್ತು ವಿವಿಧ ಸಂಘಟನೆಗಳ ಸ್ವಯಂಸೇವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಪರಿಹಾರ ಕಾರ್ಯದಲ್ಲಿ ನಿರತವಾಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಯವರು ರಾಷ್ಟ್ರಪತಿ ಹಾಗೂ ಪ್ರಧಾನಿಗೆ ವಿವರ ನೀಡಿದರು. ಈ ಕುರಿತಂತೆ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಕೊಡಗು ಜಿಲ್ಲೆಯ ಪರಿಸ್ಥಿತಿ ಕುರಿತಂತೆ ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ. ಪರಿಸ್ಥಿತಿಯ ನಿಯಂತ್ರಣಕ್ಕೆ ಕೇಂದ್ರದಿಂದ ಅಗತ್ಯ ಸಹಾಯ, ಸಹಕಾರ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.