ಕೋಟೆಬೆಟ್ಟ ಹತ್ತಿಳಿದು 80 ಗ್ರಾಮಸ್ಥರ ರಕ್ಷಣೆ

Team Udayavani, Aug 21, 2018, 6:15 AM IST

ban2108.jpg

ಸೋಮವಾರಪೇಟೆ: ಕಳೆದ 5 ದಿನಗಳಿಂದ ಹೊರ ಜಗತ್ತಿನ ಸಂಪರ್ಕ ಕಡಿದುಕೊಂಡು ಸಂತ್ರಸ್ತರಾಗಿದ್ದ ಮುಕ್ಕೋಡ್ಲು ಗ್ರಾಮದ ಸುಮಾರು 80 ಮಂದಿಯನ್ನು ರಕ್ಷಿಸಲಾಗಿದೆ.

ಮಾದಾಪುರದ ಇಗ್ಗೊàಡ್ಲು ಮಾರ್ಗವಾಗಿ ಮತ್ತು ಹಚ್ಚಿನಾಡು ಮಾರ್ಗವಾಗಿ ಮುಕ್ಕೋಡ್ಲು ತಲುಪಿದ ಯುವಕರ ತಂಡ ಗ್ರಾಮದೊಳಗೆ ಸಿಲುಕಿದ್ದ ಜನರನ್ನು ಹರಸಾಹಸ ಪಟ್ಟು ರಕ್ಷಿಸಿತು.

ಜಲಪ್ರಳಯದಿಂದ ಗ್ರಾಮದಲ್ಲಿ ಭಾರೀ ಬೆಟ್ಟಗಳು ಕುಸಿದು, ಮರಗಳು ನೆಲಕ್ಕುರುಳಿ ರಸ್ತೆ ಸಂಪರ್ಕ ನಾಶವಾಗಿದೆ. ಹಚ್ಚಿನಾಡು ಗ್ರಾಮದ ಸುಭಾಶ್‌ ಸೋಮಯ್ಯ ಎಂಬುವರ ಮನೆ ಕಣ್ಮರೆಯಾಗಿದೆ. ಮಾದಾಪುರದ ಇಗ್ಗೊàಡ್ಲು ಎಸ್ಟೇಟ್‌ ನಡುವೆ ಯಂತ್ರಗಳ ಸಹಾಯದಿಂದ ಶಾಸಕ ಅಪ್ಪಚ್ಚು ರಂಜನ್‌ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಯುವಕರು ಕಾರ್ಯಾಚರಣೆಗೆ ಇಳಿದರು. ಕೋಟೆಬೆಟ್ಟವನ್ನು ಹತ್ತಿ ಇಳಿದು ಯುವಕರು ಮುಕ್ಕೋಡ್ಲು ಮುಟ್ಟಿದರು. ಅಲ್ಲಿನ ರಾಜೇಶ್‌ ಎಂಬುವರ ಕುಟುಂಬದ ಇಬ್ಬರು ಮಕ್ಕಳು, ವೃದಟಛಿರು ಸೇರಿದಂತೆ 6 ಮಂದಿಯನ್ನು ರಕ್ಷಿಸಲಾಯಿತು. ಇದರೊಂದಿಗೆ ಸಂಪರ್ಕ ಕಡಿದುಕೊಂಡಿದ್ದ 40ಕ್ಕೂ ಅಧಿಕ ಮಂದಿಯನ್ನು ಮಾದಾಪುರ ಮಾರ್ಗವಾಗಿ ಕರೆದುಕೊಂಡು ಬರಲಾಯಿತು.

ಇತ್ತ ಸೂರ್ಲಬ್ಬಿ, ಹಮ್ಮಿಯಾಲ ಮಾರ್ಗವಾಗಿ ಹಚ್ಚಿನಾಡು ತಲುಪಿದ ತಂಡ, ಮುಕ್ಕೋಡ್ಲುನಲ್ಲಿ ಯಾರ ಸಂಪರ್ಕಕ್ಕೂ ಸಿಗದೇ ಉಳಿದುಕೊಂಡಿದ್ದ ಪೊನ್ನಚೆಟ್ಟಿರ ಮಾದಪ್ಪ-ಬೋಜಮ್ಮ ಅವರ ಮನೆಯವರನ್ನು ರಕ್ಷಿಸಿತು.

5 ದಿನಗಳಿಂದ ಆಹಾರವಿಲ್ಲದೇ ಅತಂತ್ರ ಸ್ಥಿತಿಯಲ್ಲಿದ್ದ ಕುಟುಂಬವನ್ನು ಸೋಮವಾರ ಪೇಟೆಗೆ ಕರೆತರಲಾಯಿತು. ಮನೆಯೊಳಗಿದ್ದ ವಿಕಲಚೇತನ ರತೀಶ್‌ ಅವರನ್ನು ತಂಡ ಬಡಿಗೆ ಕಟ್ಟಿಕೊಂಡು ಸುಮಾರು 6 ಕಿ.ಮೀ. ಹೊತ್ತು ಸಾಗಿದರು. ಮಂಡಿಯವರೆಗೆ ಹೂತುಕೊಳ್ಳುವ ಕೆಸರಿನ ನಡುವೆ ಸಾಹಸಪಟ್ಟು ಹಚ್ಚಿನಾಡುವರೆಗೆ ಕರೆತರಲಾಯಿತು. ಹೋಂಸ್ಟೇ ಒಂದರಲ್ಲಿ ತಂಗಿದ್ದ ಹಚ್ಚಿನಾಡು, ಕಬ್ಬಣಿ, ಮುಕ್ಕೋಡ್ಲು ಗ್ರಾಮದ ಸುಮಾರು 43 ಮಂದಿಯನ್ನು ರಕ್ಷಿಸಲಾಯಿತು. ಸ್ಥಳೀಯ ಜನಪ್ರತಿನಿಧಿಗಳು ಕಾರ್ಯಾಚರಣೆಗೆ ಸಹಕಾರ ನೀಡಿದರು.

ಮುಕ್ಕೋಡ್ಲು ಗ್ರಾಮದಲ್ಲಿ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ನಾಟಿ ಮಾಡಿದ್ದ ಗದ್ದೆಗಳು ಮುಚ್ಚಿಹೋಗಿದ್ದು, ಎರಡೂ ಬದಿಯ ಬೆಟ್ಟಗುಡ್ಡ ಕುಸಿಯುತ್ತಿದೆ. ಹೊಳೆಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಗ್ರಾಮಸ್ಥರ ರಕ್ಷಣೆ
ಕೊಡಗಿನ ಮಕ್ಕಂದೂರು, ಮುಕ್ಕೋಡ್ಲು ಸೇರಿದಂತೆ ಭೂಕುಸಿತಕ್ಕೊಳಕ್ಕಾಗಿ ಸಂಕಷ್ಟದಲ್ಲಿರುವ ಗ್ರಾಮ ವ್ಯಾಪ್ತಿಯ ಎಲ್ಲ ಜನತೆಯನ್ನು ರಕ್ಷಿಸಲಾಗಿದೆ.

ಸೋಮವಾರ ಕೂಡ ಸೇನಾ ಕಾರ್ಯಾಚರಣೆ ನಡೆಸಲಾಗಿದ್ದು, ಅಪಾಯದಲ್ಲಿದ್ದ ಎಲ್ಲ ಗ್ರಾಮಸ್ಥರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಸೇನಾ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಅಗ್ನಿಶಾಮಕ ದಳ ಮತ್ತು ಗೃಹ ರಕ್ಷಕ ದಳದ ಮಹಾ ನಿರ್ದೇಶಕ ಎಂ.ಎನ್‌.ರೆಡ್ಡಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.