ತೆವಳುತ್ತಿದೆ ಜಾನಪದ ವಿವಿ ಗ್ರಾಮ ಚರಿತ್ರೆ ಕೋಶ ಕಾರ್ಯ


Team Udayavani, Aug 21, 2018, 6:55 AM IST

20hvr4-janapada-vv.jpg

ಹಾವೇರಿ: ದೇಶದ ಪ್ರಥಮ ಜಾನಪದ ವಿಶ್ವವಿದ್ಯಾಲಯದ ಮಹತ್ವಾಕಾಂಕ್ಷಿ “ಗ್ರಾಮ ಚರಿತ್ರೆ ಕೋಶ’ ರಚನೆ ಕಾರ್ಯ ಆಮೆಗತಿಯಲ್ಲಿ ಸಾಗಿದ್ದು ನಿರೀಕ್ಷಿತ ಗುರಿ ಮುಟ್ಟುವಲ್ಲಿ ಹಿಂದೆ ಬಿದ್ದಿದೆ.

“ಗ್ರಾಮ ಚರಿತ್ರೆ ಕೋಶ’ ಯೋಜನೆಯು ಕರ್ನಾಟಕ ಜಾನಪದ ವಿವಿ ಆರಂಭಗೊಂಡಾಗ ಹಾಕಿಕೊಂಡ ಮೊದಲ ಸಂಶೋಧನಾ ಕಾರ್ಯ. 2013-14ರಲ್ಲಿಯೇ ಆರಂಭವಾಗಿದ್ದು, 2015-16ರ ಶೈಕ್ಷಣಿಕ ಸಾಲಿನಲ್ಲಿ ಪೂರ್ಣಗೊಳ್ಳಬೇಕಿತ್ತು. ಆದರೆ, ಅವ ಧಿ ಮುಗಿದು ಎರಡು ವರ್ಷಗಳಾದರೂ ಈವರೆಗೆ ಯೋಜನೆ ಅರ್ಧವೂ ಪೂರ್ಣಗೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆಯ ಕ್ಷೇತ್ರ ಮಾಹಿತಿ ಸಂಗ್ರಹ ಕಾರ್ಯ ನಡೆದಿಲ್ಲ. ಇದಕ್ಕಾಗಿ ಇನ್ನೂ ಒಂದು ವರ್ಷ ಸಮಯ  ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಬಳಿ ಕೇಳಿಕೊಂಡಿದ್ದ ವಿವಿ, 2017ರ ಮಾರ್ಚ್‌ ಒಳಗೆ ಎಲ್ಲ ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಪಡಿಸುವುದಾಗಿ ಹೇಳಿತ್ತು. ಆದರೆ ಸಮಯ ಮೀರಿ ಒಂದೂವರೆ ವರ್ಷವಾದರೂ ಯೋಜನೆ ಪೂರ್ಣಗೊಂಡಿಲ್ಲ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಜಾನಪದ ವಿವಿ ಕೇವಲ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪ್ರಕಟಿಸಿ ಬಿಡುಗಡೆಗೊಳಿಸಿದೆ. ಪ್ರಸ್ತುತ ಮಂಡ್ಯ, ಮೈಸೂರು ಹಾಗೂ ಹಾಸನ ಜಿಲ್ಲೆಗೆಳ ಗ್ರಾಮ ಚರಿತ್ರೆ ಕೋಶ ಮುದ್ರಣ ಹಂತದಲ್ಲಿದ್ದು ಇನ್ನುಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಸಿದ್ಧಗೊಳ್ಳಬೇಕಾಗಿದೆ. ಬಾಕಿ ಉಳಿದಿರುವ ಕೆಲವು ಜಿಲ್ಲೆಗಳಲ್ಲಿ ಕ್ಷೇತ್ರ ಸಮೀûಾ ಕಾರ್ಯವೂ ಪೂರ್ಣಗೊಂಡಿಲ್ಲ. ವಿವಿಯ ಮುಖ್ಯಸ್ಥರು ತಿಳಿಸುವಂತೆ ವಿಜಯಪುರದ ಕ್ಷೇತ್ರ ಸಮೀಕ್ಷೆ ಹೊಸದಾಗಿ ಆರಂಭವಾಗಬೇಕಿದೆ.

ಏನಿದು ಗ್ರಾಮ ಚರಿತ್ರೆ ಕೋಶ?: ನಾಡಿನ ದೇಸಿ ಪರಿಸರವನ್ನು ಅದರ ಮೂಲ ಆಕರಗಳೊಂದಿಗೆ ಸಂಗ್ರಹಿಸಿ, ದಾಖಲಿಸಿ ಸಂರಕ್ಷಿಸುವ ಉದ್ದೇಶದಿಂದ ರಚಿಸಿದ್ದೇ “ಗ್ರಾಮ ಚರಿತ್ರೆ ಕೋಶ’ ಯೋಜನೆ. ಸಾಂಸ್ಕೃತಿಕ ಕಣಜಗಳಾಗಿರುವ ರಾಜ್ಯದ ಎಲ್ಲ ಗ್ರಾಮಗಳಲ್ಲಿನ ಜೀವಸಂಕುಲ, ಭಾಷಾ ಬಳಕೆ ಮತ್ತು ಅಭಿವೃದ್ಧಿಯ ವಿಶಿಷ್ಟ ರೂಪಗಳು, ಜನವಸತಿ, ಶಾಲಾ-ಕಾಲೇಜು, ನೀರಿನ ವ್ಯವಸ್ಥೆ ಹೀಗೆ ಎಲ್ಲವನ್ನು ಸಂಗ್ರಹಿಸಿ, ದಾಖಲಿಸಿ ಪುಸ್ತಕ ರೂಪದಲ್ಲಿ ಹೊರತರುವ ಗುರಿ ಈ ಯೋಜನೆಯದ್ದಾಗಿದೆ.

ಎಷ್ಟು ಖರ್ಚು?: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅನುದಾನದಲ್ಲಿ ಕೈಗೊಂಡಿರುವ ಈ ಯೋಜನೆಯನ್ನು 10 ಕೋಟಿ ರೂ.ಗಳಲ್ಲಿ ರೂಪಿಸಿದ್ದು ಈಗಾಗಲೇ 8.60 ಕೋಟಿ ರೂ. ಬಿಡುಗಡೆಯಾಗಿದೆ. ಬಾಕಿ ಉಳಿದ 1.40 ಕೋಟಿ ರೂ. ಬಿಡುಗಡೆ ಮಾಡಲು ಇಲಾಖೆ ಸಿದ್ಧವಾಗಿದೆಯಾದರೂ ಬಿಡುಗಡೆಯಾಗಿರುವ ಅನುದಾನಕ್ಕೆ ತಕ್ಕಂತೆ ಕೆಲಸ ಆಗದೆ ಇರುವುದರಿಂದ ವಿವಿಯೇ ಇನ್ನೂ ಬಾಕಿ ಅನುದಾನ ಪಡೆದುಕೊಂಡಿಲ್ಲ.

ಗುರಿಯಂತೆ “ಗ್ರಾಮ ಚರಿತ್ರೆ ಕೋಶ’ ರಚನೆ 2016ಕ್ಕೆ ಪೂರ್ಣಗೊಳ್ಳಬೇಕಿತ್ತು. ರಾಜ್ಯದ 59000 ಗ್ರಾಮಗಳ ತಳಮಟ್ಟದ ಸಮೀಕ್ಷೆ ಇದಾಗಿರುವುದರಿಂದ ನಿಖರ ಮಾಹಿತಿ ಸಂಗ್ರಹಕ್ಕಾಗಿಯೇ ಹೆಚ್ಚು ಸಮಯ ಬೇಕಾಗಿದೆ. ಈಗಾಗಲೇ 13 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶ ಪೂರ್ಣಗೊಂಡಿದೆ. ಮೂರು ಜಿಲ್ಲೆಗಳ ಕೋಶ ಕೊನೆ ಹಂತದಲ್ಲಿದ್ದು ಉಳಿದ 14 ಜಿಲ್ಲೆಗಳ ಗ್ರಾಮ ಚರಿತ್ರೆ ಕೋಶವನ್ನು ಈ ಆರ್ಥಿಕ ವರ್ಷದೊಳಗೆ ಪೂರ್ಣಗೊಳಿಸಲಾಗುವುದು.
– ಪ್ರೊ.ಡಿ.ಬಿ. ನಾಯಕ, ಕುಲಪತಿ, ಜಾನಪದ ವಿವಿ

 – ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.