ಮಲೆನಾಡಲ್ಲಿ ಹೆಚ್ಚುತ್ತಿದೆ ಭೂ ಕುಸಿತ

Team Udayavani, Aug 23, 2018, 6:00 AM IST

western-ghats-chikmagalur-district.jpg

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪ್ರದೇಶದ ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆ ಪ್ರಮಾಣ ತಗ್ಗಿದರೂ ಗುಡ್ಡ, ರಸ್ತೆಗಳು ಕುಸಿಯುತ್ತಲೇ ಇವೆ. ಬುಧವಾರ ಸಹ ಹಲವೆಡೆ ಗುಡ್ಡ ಕುಸಿದಿದ್ದು, ರಸ್ತೆಗಳು ಬಿರುಕು ಬಿಟ್ಟಿವೆ.

ಚಿಕ್ಕಮಗಳೂರು ತಾಲೂಕಿನ ಖಾಂಡ್ಯ ಬಳಿಯ ಬಿದರೆ ಗ್ರಾಮದ ಸತೀಶ್‌ ಭಟ್‌ ಎನ್ನುವವರಿಗೆ ಸೇರಿದ ಅಡಿಕೆ ತೋಟದಲ್ಲಿ ಭೂಮಿ ಕುಸಿದು ನಷ್ಟವಾಗಿದೆ. ಸುಮಾರು 20 ಅಡಿ ಆಳಕ್ಕೆ ಭೂಮಿ ಕುಸಿದಿದ್ದು, ಒಂದು ಎಕರೆ ಪ್ರದೇಶದಲ್ಲಿದ್ದ ಅಡಿಕೆ, ಕಾಫಿ ಮತ್ತು ಕಾಳುಮೆಣಸು ನಾಶವಾಗಿದೆ. ತಾಲೂಕಿನ ಬೊಗಸೆ ವಡ್ಡಿ ಎಂಬಲ್ಲಿ ನಾಲ್ಕು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದು ಸಂಚಾರ ಸ್ಥಗಿತಗೊಂಡಿದೆ. ರಸ್ತೆಯ ಒಂದು ಬದಿ ಸಂಪೂರ್ಣ ಕುಸಿದ್ದಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ಎನ್‌.ಆರ್‌.ಪುರ ತಾಲೂಕಿನ ಮೇಲ್ಪಾಲ್‌ ಎಂಬಲ್ಲಿ ಗುಡ್ಡ ಕುಸಿದು, ಹಳಸೆ ಶಿವಣ್ಣ ಎನ್ನುವವರ ಕಾಫಿತೋಟಕ್ಕೆ ಹಾನಿಯಾಗಿದೆ. ಗುಡ್ಡ ಕುಸಿತದ ಮಣ್ಣು ಬಿದ್ದು ಸುಮಾರು 1 ಎಕರೆ ಪ್ರದೇಶದ ಕಾಫಿ, ಕಾಳುಮೆಣಸು ಬೆಳೆ ನಾಶವಾಗಿದೆ.

ಮಳೆಗಾಲವಿಡೀ ಕುಸಿತ:
ಈ ವರ್ಷ ಮಳೆಗಾಲದ ಆರಂಭದಿಂದಲೂ ಮಲೆನಾಡು ಭಾಗದಲ್ಲಿ ಗುಡ್ಡ ಕುಸಿಯುತ್ತಲೇ ಇದ್ದು, ಪ್ರಮಾಣ ಹೆಚ್ಚಿದೆ. ಅಲ್ಲದೆ, ಜಿಲ್ಲೆಯ ಹಲವೆಡೆ ರಸ್ತೆಗಳು ಬಿರುಕು ಬಿಟ್ಟಿವೆ. ಭಾರೀ ಮಳೆಯಿಂದ ಮೂಡಿಗೆರೆ ತಾಲೂಕು ಚಾರ್ಮಾಡಿ ಘಾಟಿ ರಸ್ತೆಯ ಹಲವೆಡೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಅದೇ ರೀತಿ ಕಳಸ-ಮಂಗಳೂರು ರಸ್ತೆಯಲ್ಲಿಯೂ ಗುಡ್ಡ ಕುಸಿದಿತ್ತು.

ಕೊಪ್ಪದಲ್ಲಿ ಜಾಸ್ತಿ:
ಭೂಕುಸಿತ ಪ್ರಕರಣಗಳು ಕೊಪ್ಪ ತಾಲೂಕಿನಲ್ಲಿ ಹೆಚ್ಚಾಗಿದ್ದು, ಮುಂದುವರಿದಿದೆ. ತಾಲೂಕಿನ ಹೇರೂರು ಸಮೀಪ ಗುಡ್ಡ ಕುಸಿದಿತ್ತು. ಮೇಗುಂದ ಸಮೀಪದ ಗುಡ್ಡೆತೋಟದ ರಸ್ತೆಯಲ್ಲಿ ಬಿರುಕು ಬಿಟ್ಟಿತ್ತಲ್ಲದೆ ಭೂ ಕುಸಿತವುಂಟಾಗಿತ್ತು. ಶಾನುವಳ್ಳಿ ಗ್ರಾಮದಲ್ಲಿ ಭೂ ಕುಸಿತವುಂಟಾಗಿ ಬಾವಿಯೊಂದು 30 ಅಡಿ ಆಳಕ್ಕೆ ಕುಸಿದು ಸುರಂಗ ಉಂಟಾಗಿತ್ತು. ಹೇರೂರು ಗ್ರಾಮದ ಬಳಿ ಭೂ ಕುಸಿತವುಂಟಾಗಿತ್ತು. ಹಾಲುಗರಡಿ, ಬೈರದೇವರು, ಸಂವಾನೆ ಗ್ರಾಮಗಳಲ್ಲಿ ಗುಡ್ಡ ಕುಸಿದಿತ್ತು. ಬಂಡಿಗಡಿ ಸಮೀಪ ಭೂ ಕುಸಿತದಿಂದ ವಿದ್ಯುತ್‌ ಪರಿವರ್ತಕ ಹಾಗೂ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿ 4 ಗ್ರಾಮಗಳಿಗೆ ವಿದ್ಯುತ್‌ ಸಂಪರ್ಕ ಕಡಿತಗೊಂಡಿತ್ತು. ಬೂತನಕಾಡು ಬಳಿ ಭೂ ಕುಸಿತವುಂಟಾಗಿ ಕಾಫಿ, ಅಡಕೆ ತೋಟಗಳಿಗೆ ಮಣ್ಣು ನುಗ್ಗಿ ಬೆಳೆಹಾನಿಯಾಗಿತ್ತು.
ಇದಲ್ಲದೆ ನರಸಿಂಹರಾಜಪುರ ತಾಲೂಕಿನ ಮೇಲ್ಪಾಲ್‌ ಗ್ರಾಮದ ಬಳಿ ಹಲವು ಬಾರಿ ಭೂಕುಸಿತವುಂಟಾಗಿತ್ತು. ಶೃಂಗೇರಿ ತಾಲೂಕಿನಲ್ಲೂ ಸಹ ಹಲವೆಡೆ ಗುಡ್ಡ ಕುಸಿದಿದೆ. 

ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಬೆಟ್ಟ ಶ್ರೇಣಿಯಲ್ಲಿ ಹಲವು ಬಾರಿ ಗುಡ್ಡ ಕುಸಿದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಆರಂಭದಿಂದಲೂ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಗಾಳಿ ಮಳೆಯೊಂದಿಗೆ ಆಗಾಗ ಗುಡ್ಡ ಕುಸಿಯುತ್ತಲೇ ಇದೆ. ಭಾರೀ ಮಳೆಗೆ ಗುಡ್ಡ ಕುಸಿದು ಕೊಡಗು ಕೊಚ್ಚಿಹೋಗಿರುವುದು ಕಣ್ಣೆದುರಿಗಿದ್ದು, ಜಿಲ್ಲೆಯ ಮಲೆನಾಡು ಭಾಗದ ಜನರಲ್ಲಿ ಆತಂಕ ಮೂಡಿಸಿದೆ.

ಟಾಪ್ ನ್ಯೂಸ್

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.