CONNECT WITH US  

3183 ಮಂದಿಗೆ ಆಶ್ರಯ: ಮುಂದುವರಿದ ಆರೋಗ್ಯ ಸೇವೆ

ಮಡಿಕೇರಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಸಾಕಷ್ಟು ಜನರು ತತ್ತರಿಸಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಪರಿಹಾರ ಕೇಂದ್ರದಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಪರಿಹಾರ ಕೇಂದ್ರದಲ್ಲಿ ವ್ಯವಸ್ಥಿತವಾಗಿ ಊಟೋಪಚಾರ ಕಲ್ಪಿಸುವುದರ ಜತೆಗೆ ಆರೋಗ್ಯವನ್ನು ನೋಡಿಕೊಳ್ಳುವ ನಿಟ್ಟಿನಲ್ಲಿ ಪ್ರತಿ ಪರಿಹಾರ ಕೇಂದ್ರಕ್ಕೆ ಇಬ್ಬರು ವೈದ್ಯರು ಹಾಗೂ ಶುಶ್ರೂಷಕರನ್ನು ನಿಯೋಜಿಸಲಾಗಿದ್ದು ಎಲ್ಲ ರೀತಿಯ ಔಷಧಿ ದಾಸ್ತಾನು ಮಾಡಿಕೊಳ್ಳಲಾಗಿದೆ. ಮಡಿಕೇರಿ ತಾಲೂಕಿಗೆ 2, ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ 1 ಮತ್ತು ವಿರಾಜಪೇಟೆಯಲ್ಲಿ 1 ತಂಡವನ್ನು ರಚಿಸಲಾಗಿದೆ. ಒಂದು ತಂಡದಲ್ಲಿ ಒಬ್ಬ ವೈದ್ಯಾಧಿಕಾರಿ, ಹಿರಿಯ ಆರೋಗ್ಯ ಸಹಾಯಕರು, 4 ಮಂದಿ ಕಿರಿಯ ಆರೋಗ್ಯ ಸಹಾಯಕರು ಕಾರ್ಯನಿರ್ವಹಿಸಲಿದ್ದಾರೆ.

ಈ ತಂಡವು ಪ್ರವಾಹ ಪೀಡಿತ ಹಾಗೂ ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಚಿಕಿತ್ಸೆ ನೀಡಲಿದೆ
 ಎಂದು ರಾಷ್ಟ್ರೀಯ ರೋಗವಾಹಕ ನಿಯಂತ್ರಣ ಕಾರ್ಯಕ್ರಮದ ಉಪ ನಿರ್ದೇಶಕ ಡಾ|ಬಿ.ಜಿ.ಪ್ರಕಾಶ್‌ ಕುಮಾರ್‌  ಮಾಹಿತಿ ನೀಡಿದ್ದಾರೆ.

1036 ಕುಟುಂಬಗಳು: ಜಿಲ್ಲೆಯಲ್ಲಿರುವ 26 ಪರಿಹಾರ ಕೇಂದ್ರಗಳಲ್ಲಿ ಒಟ್ಟು 1036 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 1520 ಪುರುಷ ಮತ್ತು 1663 ಮಹಿಳೆ ಸೇರಿದಂತೆ ಒಟ್ಟು 3183 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

Trending videos

Back to Top