ಕಾಂಗ್ರೆಸ್-ಜೆಡಿಎಸ್ ನಡುವೆ ಸಮಸ್ಯೆಗಳಿಲ್ಲ: ಕುಮಾರಸ್ವಾಮಿ
Team Udayavani, Aug 29, 2018, 6:00 AM IST
ಮೈಸೂರು: ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಯಾವುದೇ ಸಮಸ್ಯೆಗಳಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಹೊಂದಾಣಿಕೆ ವಿಚಾರದಲ್ಲಿ ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಈ ಎರಡೂ ಪಕ್ಷಗಳ ನಡುವೆ ಸಮಸ್ಯೆಗಳಿವೆ ಎಂದು ಹೇಳಿದ್ದೆ. ಆದರೆ ನನ್ನ ಸಂದರ್ಶನದ ಹೇಳಿಕೆಯನ್ನು ಆಂಗ್ಲ ಮಾಧ್ಯಮವೊಂದರಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ಯಾವುದೇ
ಭಿನ್ನಾಭಿಪ್ರಾಯಗಳಿಲ್ಲ. ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಶೀಘ್ರ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಕೆಲವು ಕಾರಣಗಳಿಂದ ಸಮನ್ವಯ ಸಭೆ ನಡೆಸುವುದು ವಿಳಂಬವಾಗಿದೆ. ಕೊಡಗಿನಲ್ಲಿ ನೆರೆ ಪ್ರವಾಹ ಉಂಟಾಗಿ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಜನರಿಗೆ ಹೊಸ ಬದುಕು ಕಟ್ಟಿಕೊಡಲು ಸರ್ಕಾರ ಬದ್ದವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!