ಕಸ್ತೂರಿರಂಗನ್‌ ವರದಿ: ಕೇಂದ್ರ ಸರಕಾರದ ನಿಲುವಿನೆಡೆ ಚಿತ್ತ


Team Udayavani, Aug 30, 2018, 6:00 AM IST

kasturi-rangan-report.jpg

ಬೆಂಗಳೂರು: ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂಬುದಾಗಿ ಪರಿಗಣಿಸುವ ಕಸ್ತೂರಿ ರಂಗನ್‌ ವರದಿ ಕುರಿತಂತೆ ಮೂರನೇ ಬಾರಿ ಹೊರಡಿಸಿದ ಕರಡು ಅಧಿಸೂಚನೆಯ ಅವಧಿಯೂ ಮುಗಿದು ಅದು ರದ್ದುಗೊಂಡಿರುವುದರಿಂದ ಪ್ರಕರಣದಲ್ಲಿ ಕೇಂದ್ರ ಸರಕಾರ ಕೈಗೊಳ್ಳಬಹುದಾದ ತೀರ್ಮಾನ ಕುತೂಹಲ ಕೆರಳಿಸಿದೆ.

ನಿಯಮದಂತೆ ಈಗ ಮತ್ತೆ ಹೊಸದಾಗಿ ಕರಡು ಅಧಿಸೂಚನೆ ಹೊರಡಿಸಬೇಕು. ಆದರೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರು ವುದರಿಂದ ಏನೇ ನಿರ್ಧಾರ ಕೈಗೊಳ್ಳುವುದಿದ್ದರೂ ಕೋರ್ಟ್‌ನ ಗಮನಕ್ಕೆ ತರಬೇಕಾಗುತ್ತದೆ. ಈ ಸಂದರ್ಭದಲ್ಲಿ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ನ ಮುಂದೆ ಕಸ್ತೂರಿರಂಗನ್‌ ವರದಿ ಜಾರಿ ಕುರಿತು ಯಾವ ರೀತಿಯ ಅಭಿಪ್ರಾಯ ತಿಳಿಸಲಿದೆ ಎಂಬುದರ ಆಧಾರದ ಮೇಲೆ ಮುಂದಿನ ಬೆಳವಣಿಗೆ ಅವಲಂಬಿಸಿರುತ್ತದೆ.

ಕಸ್ತೂರಿರಂಗನ್‌ ವರದಿ ಜಾರಿಗೊಳಿಸಲು ಕೇಂದ್ರ ಸರಕಾರಕ್ಕೆ ನಿರ್ದೇಶ  ನೀಡುವಂತೆ ಕೋರಿ ಕೆಲವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದು, ಈ ವೇಳೆ ಪಶ್ಚಿಮಘಟ್ಟ ವ್ಯಾಪ್ತಿಗೆ ಬರುವ ರಾಜ್ಯಗಳ ಅಭಿಪ್ರಾಯ ಪಡೆದು ಕಸ್ತೂರಿರಂಗನ್‌ ವರದಿ ಜಾರಿಗೊಳಿಸುವ ಬಗ್ಗೆ ಕೇಂದ್ರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ವರದಿಯ ಕುರಿತು ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರಕಾರಗಳಿಗೆ ನಿರ್ದೇಶಿಸಿ 2014ರಲ್ಲಿ ಮೊದಲ ಕರಡು ಅಧಿಸೂಚನೆ ಹೊರಡಿಸಿತ್ತು. ಈ ವೇಳೆ ಎಲ್ಲ ರಾಜ್ಯಗಳು ವರದಿ ಜಾರಿಯನ್ನು ಸಾರಾಸಗಟಾಗಿ ವಿರೋಧಿಸಿದ್ದರಿಂದ 2015ರ ಸೆಪ್ಟಂಬರ್‌ನಲ್ಲಿ ಎರಡನೇ ಬಾರಿ ಅಧಿಸೂಚನೆ ಹೊರಡಿಸಲಾಗಿತ್ತು. 

ಈ ಬಾರಿ ಕೆಲ ಸರಕಾರಗಳು ಮಾರ್ಪಾಡುಗಳೊಂದಿಗೆ ವರದಿ ಜಾರಿಗೆ ಒಪ್ಪಿಗೆ ಸೂಚಿಸಿ ಆಕ್ಷೇಪಣೆ ಸಲ್ಲಿಸಿದ್ದವು. ಈ ವೇಳೆ ಕರ್ನಾಟಕ ಮತ್ತು ತಮಿಳುನಾಡಿನ ಆಕ್ಷೇಪಣೆಗಳು ತಿರಸ್ಕೃತಗೊಂಡಿದ್ದವು.

ಈ ಕರಡು ಆಧರಿಸಿ ಅಂತಿಮ ಅಧಿಸೂಚನೆ ಹೊರಡಿಸಲು ಸಾಧ್ಯವಿಲ್ಲ. ಆದ್ದರಿಂದ ಕೇಂದ್ರ ಮತ್ತೂಮ್ಮೆ ಕರಡು ಅಧಿಸೂಚನೆ ಹೊರಡಿಸಿ ರಾಜ್ಯಗಳ ಅಭಿಪ್ರಾಯ ಆಲಿಸಬೇಕಾಗುತ್ತದೆ. ಆದರೆ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವುದರಿಂದ ಕೋರ್ಟ್‌ ನಿರ್ಧಾರವನ್ನು  ಅದು ಅವಲಂಬಿಸಿರುತ್ತದೆ. ಒಂದೊಮ್ಮೆ ಈಗಾಗಲೇ ಹೊರಡಿಸಿರುವ ಕರಡು ಅಧಿಸೂಚನೆ ಆಧರಿಸಿ ಅಂತಿಮ ಅಧಿಸೂಚನೆ ಹೊರಡಿಸುವಂತೆ ನಿರ್ದೇಶಿಸಿದರೆ ಕೇಂದ್ರ ಅದನ್ನು ಪಾಲಿಸಬೇಕಾಗುತ್ತದೆ. ಇಲ್ಲವೇ ಮುಂದಿನ ಕ್ರಮ ಕೈಗೊಳ್ಳಲು ಅವಕಾಶ ನೀಡಿದರೆ ಆಗ ಕೇಂದ್ರ ಸರಕಾರ ಯಾವುದೇ ತೀರ್ಮಾನ ಕೈಗೊಳ್ಳಲು ಮುಕ್ತ ಮಾರ್ಗ ಸೃಷ್ಟಿಯಾದಂತಾಗುತ್ತದೆ ಎನ್ನುತ್ತಾರೆ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು.

ನಿಲುವು ಬದಲಿಲ್ಲ: ರಾಜ್ಯ
ಭಾರೀ ಮಳೆಗೆ ಕೊಡಗು ಸಹಿತ ಮಲೆನಾಡು ಭಾಗದಲ್ಲಿ ಸಾಕಷ್ಟು ಅನಾಹುತ ಸಂಭವಿಸಿದರೂ ಪಶ್ಚಿಮ ಘಟ್ಟದ ಜನವಸತಿ ಪ್ರದೇಶಗಳಲ್ಲಿ ಕಸ್ತೂರಿರಂಗನ್‌ ಜಾರಿ ಬೇಡ ಎಂಬ ತನ್ನ ನಿರ್ಧಾರದಿಂದ ಹಿಂದೆ ಸರಿಯದಿರಲು  ರಾಜ್ಯ ಸರಕಾರ ತೀರ್ಮಾನಿಸಿದೆ. ಕೇಂದ್ರ ಸರಕಾರದ ಅರಣ್ಯ ಸಂರಕ್ಷಣಾ ಕಾಯ್ದೆ, ಕರ್ನಾಟಕ ಅರಣ್ಯ ಕಾಯ್ದೆಗಳು ಜಾರಿಯಲ್ಲಿವೆ. ಅವುಗಳ ಆಧಾರದ ಮೇಲೆ ಪಶ್ಚಿಮಘಟ್ಟಗಳ ಸಂರಕ್ಷಣೆಗೆ ರಾಜ್ಯ ಸರಕಾರ ಸಾಕಷ್ಟು ಕ್ರಮ ಕೈಗೊಂಡಿದೆ. ವರದಿ ಜಾರಿಯಾದರೆ ಜನವಸತಿ ಪ್ರದೇಶಗಳಿಗೆ ತೊಂದರೆಯಾಗುತ್ತದೆ. ವರದಿ ಜಾರಿಗೊಳಿಸುವುದಿದ್ದರೂ ಪಶ್ಚಿಮಘಟ್ಟ ವ್ಯಾಪ್ತಿಗೆ ಬರುವ ರಾಜ್ಯದ 20,688 ಚದರ ಕಿ.ಮೀ. ಪೈಕಿ ಜನವಸತಿ ಇರುವ 1571 ಚದರ ಕಿ.ಮೀ. ಪ್ರದೇಶವನ್ನು ಅಧಿಸೂಚನೆಯಿಂದ ಕೈಬಿಡಬೇಕೆಂಬುದು ಸರಕಾರದ ನಿಲುವಾಗಿದೆ.

ಯಾವ ರಾಜ್ಯದಲ್ಲಿ ಎಷ್ಟು?
ಒಟ್ಟು ಚದರ ಕಿ.ಮೀ.ಗಳಲ್ಲಿ 56824
ಗುಜರಾತ್‌:448
ಮಹಾರಾಷ್ಟ್ರ:17,340
ಕರ್ನಾಟಕ :20,668
ಗೋವಾ :1,461
ತಮಿಳುನಾಡು:6,914
ಕೇರಳ: 9,993

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.