CONNECT WITH US  

ಎಚ್‌.ಡಿ.ದೇವೇಗೌಡ ಟ್ವಿಟರ್‌ನಲ್ಲಿ ಸಕ್ರಿಯ

ಬೆಂಗಳೂರು: ರಾಜಕೀಯ ವಲಯದಲ್ಲಿ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದ್ದರೂ ಇದುವರೆಗೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಇದೀಗ ಟ್ವಿಟರ್‌ನಲ್ಲಿ ಸಕ್ರಿಯರಾಗಿದ್ದಾರೆ.

ಆ. 22ರಂದು ಸಾಮಾಜಿಕ ಜಾಲತಾಣ ಟ್ವಿಟರ್‌ ಪ್ರವೇಶಿಸಿರುವ ದೇವೇಗೌಡರು ಗುರುವಾರ ಅದರ ಮೂಲಕವೇ ಶತದಿನ ಪೂರೈಸಿದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರಕ್ಕೆ ಮತ್ತು ಮೈತ್ರಿಕೂಟದಲ್ಲಿರುವ ಎಲ್ಲಾ ಸಚಿವರು, ಶಾಸಕರಿಗೆ ಶುಭ ಕೋರಿದ್ದಾರೆ. ಈ ಸರ್ಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೆ ಏರಲಿ ಎಂದು ಹಾರೈಸಿದ್ದಾರೆ. ಅಲ್ಲದೆ, ಇನ್ನುಮುಂದೆ ರಾಷ್ಟ್ರ ರಾಜಕಾರಣ, ಜಾಗತಿಕ ವಿದ್ಯಮಾನಗಳ ಬಗ್ಗೆ ಇದೇ ಖಾತೆಯಲ್ಲಿ ತಮ್ಮ ಅಭಿಪ್ರಾಯ ಮತ್ತು ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ.

ಆ. 22ರಿಂದ ಒಟ್ಟು ಏಳು ಟ್ವೀಟ್‌ಗಳನ್ನು ಮಾಡಿರುವ ದೇವೇಗೌಡರು ಇನ್ನುಮುಂದೆ ಟ್ವಿಟರ್‌ನಲ್ಲಿ ಹೆಚ್ಚು ಕ್ರಿಯಾಶೀಲರಾಗಲು ಮುಂದಾಗಿದ್ದಾರೆ. ಅದಕ್ಕಾಗಿಯೇ ಇಬ್ಬರನ್ನು ನೇಮಕ ಮಾಡಿದ್ದಾರೆ ಎಂದು ತಿಳಿದುಬಂದಿದೆ.


Trending videos

Back to Top