ಪತ್ರಕರ್ತೆ ಗೌರಿ ಲಂಕೇಶ್‌ ಯಾರು ಎಂಬುದೇ ಗೊತ್ತಿಲ್ಲ

Team Udayavani, Aug 31, 2018, 6:25 AM IST

murder-case.jpg

ಬೆಳಗಾವಿ: “ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ನನ್ನ ಪತಿಯನ್ನು ಎಸ್‌ಐಟಿಯವರು ಯಾವುದೇ ಆಧಾರವಿಲ್ಲದೇ ಬಂಧಿಸಿದ್ದು, ಗೌರಿ ಲಂಕೇಶ ಯಾರೆಂಬುದೇ ನನ್ನ ಪತಿಗೆ ಗೊತ್ತಿಲ್ಲ’ ಎಂದು ಭರತ ಕುರಣೆ ಪತ್ನಿ ಗಾಯತ್ರಿ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಗಂಧ ಗಾಳಿಯೇ ಗೊತ್ತಿಲ್ಲದ ನನ್ನ ಪತಿಯನ್ನು ಎಸ್‌ಐಟಿ ಬಂಧಿಸಿದೆ. ವಿಚಾರಣೆಗೆ ಕರೆದುಕೊಂಡು ಹೋಗಿ ಮಾನಸಿಕ ಕಿರುಕುಳ ನೀಡುತ್ತಿದೆ. ದುಡಿದು ತಿನ್ನುತ್ತಿದ್ದ ನಮ್ಮ ಬದುಕಿಗೆ ಪೊಲೀಸರು ಕಲ್ಲು ಹಾಕಿದ್ದಾರೆ’ ಎಂದು ಆರೋಪಿಸಿ ಕಣ್ಣೀರು ಸುರಿಸಿದರು.

“ಪತಿಯನ್ನು ಬಂಧಿಸಿ ಮಾನಸಿಕ ಹಿಂಸೆ ನೀಡುತ್ತಿರುವ ಮಾಹಿತಿ ದೊರೆತಿದೆ. ಎಂಟು ತಿಂಗಳ ಗರ್ಭಿಣಿಯಾದ ನನಗೂ ಇದು ಪರೋಕ್ಷವಾಗಿ ಹಿಂಸೆ ಕೊಟ್ಟಂತಾಗಿದೆ. ಒಂದು ತಿಂಗಳಿಂದ ತಂದೆ ಇಲ್ಲದೆ ನನ್ನ ಇಬ್ಬರು ಹೆಣ್ಣು ಮಕ್ಕಳೂ ತೀವ್ರವಾಗಿ ನೊಂದಿದ್ದಾರೆ. ಅಮಾಯಕರಾದ ನನ್ನ ಪತಿಯನ್ನು ವಾಪಸ್‌ ಕಳುಹಿಸಬೇಕು’ ಎಂದು ಮನವಿ ಮಾಡಿದರು.

“ನನ್ನ ಪತಿ 2013ರ ಅಕ್ಟೋಬರ್‌ 31ರಂದು ಖಾನಾಪುರ ತಾಲೂಕಿನ ಚಿಕಲೆ ಎಂಬಲ್ಲಿ 3 ಎಕರೆ ಜಾಗ ಖರೀದಿಸಿದ್ದು, 2015ರ ಜನವರಿ 26ರಂದು ರೆಸಾರ್ಟ್‌ ಆರಂಭಿಸಿದ್ದರು. ಒಂದೂವರೆ ವರ್ಷಗಳ ಕಾಲ ರೆಸಾರ್ಟ್‌ ಚೆನ್ನಾಗಿಯೇ ನಡೆದಿತ್ತು. ಬಳಿಕ ಜಾಗ ಕೃಷಿಯೇತರ (ಎನ್‌ಎ)ಅಲ್ಲ ಎಂಬ ಕಾರಣಕ್ಕೆ ಅರಣ್ಯ ಇಲಾಖೆಯವರು 2016, ಡಿ.27ರಂದು ತೆರವುಗೊಳಿಸಿದ್ದಾರೆ. ರೆಸಾರ್ಟ್‌ ಬಂದ್‌ ಮಾಡಿರುವಾಗ ಅಲ್ಲಿ ಬಂದೂಕು ತರಬೇತಿ ನೀಡಲಾಗಿದೆ ಎಂಬ ಸುಳ್ಳು ಸುದ್ದಿ ಹರಡಿದ್ದು, ಮನಸ್ಸಿಗೆ ತೀವ್ರ ನೋವು ತಂದಿದೆ’ ಎಂದು ಹೇಳಿದರು.

ಎಸ್‌ಐಟಿ ಈಗ ಬಂಧಿಸಿರುವ ಸಾಗರ, ನನ್ನ ಪತಿಯ ಸ್ನೇಹಿತ. ನಮ್ಮ ರೆಸಾರ್ಟ್‌ನಲ್ಲಿ ಕೆಲಸ ಮಾಡುವಾಗ ಅನೇಕ ಸಲ ಅವರಿಗೆ  ಕರೆ ಮಾಡಿದ್ದನ್ನೇ ಆಧಾರವಾಗಿಟ್ಟುಕೊಂಡು ಗೌರಿ ಹತ್ಯೆ ಪ್ರಕರಣಕ್ಕಾಗಿ ಸಂಪರ್ಕಿಸಲಾಗಿದೆ ಎಂಬ ಸುಳ್ಳು ಆರೋಪ ಹೊರಿಸಿ ಅವರನ್ನೂ ಬಂಧಿಸಲಾಗಿದೆ. ಅಂದರೆ, ಭರತ ಕುರಣೆಗೆ ಪರಿಚಯವಿರುವವರೆಲ್ಲರನ್ನೂ ಬಂಧಿಸುತ್ತಾರೆಯೇ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು.

ನನ್ನ ಮಗ ತಪ್ಪೇ ಮಾಡಿಲ್ಲ:
ತಾಯಿ ರೇಖಾ ಕುರಣೆ ಮಾತನಾಡಿ, “ಕರ್ಪೂರ ಹಾಗೂ ಅಗರಬತ್ತಿ ಮಾರುತ್ತ ಕಷ್ಟಪಟ್ಟು ಬೆಳೆದಿರುವ ನನ್ನ ಮಗ ಭರತ, ರೆಸಾರ್ಟ್‌ ಉದ್ಯೋಗ ನಡೆಸಿ ಈಗ ತರಕಾರಿ ಮಾರುಕಟ್ಟೆಯಲ್ಲಿ ಅಂಗಡಿ ಇಟ್ಟುಕೊಂಡಿದ್ದಾನೆ. ರೆಸಾರ್ಟ್‌ನಲ್ಲಿ ಬಂದೂಕು ತರಬೇತಿ ಎಂಬ ಸುಳ್ಳು ಸುದ್ದಿ ಹಬ್ಬಿಸಿ ನಮ್ಮ ಮನಸ್ಸಿಗೆ ತೀವ್ರ ನೋವುಂಟು ಮಾಡಲಾಗಿದೆ. ನನ್ನ ಮಗ ತಪ್ಪೇ ಮಾಡಿಲ್ಲ ಎಂದರೆ ಬಂಧಿಸಿದ್ದು ಏಕೆ?’ ಎಂದು ಪ್ರಶ್ನಿಸಿದರು.

ಭರತನನ್ನು ಭೇಟಿ ಮಾಡಿಸಲು ಎಸ್‌ಐಟಿಯವರು ಬಿಡುತ್ತಿಲ್ಲ. ಮೂರು ಸಲ ಹೋದರೂ ನಮ್ಮ ವಿಡಿಯೋ ಮಾಡಿಕೊಳ್ಳುತ್ತಿದ್ದಾರೆ. ಭರತನಿಗೆ ಬೇಕಾದ ವಕೀಲನನ್ನು ನೇಮಿಸಿಕೊಳ್ಳಲು ಎಸ್‌ಐಟಿಯವರು ಬಿಡಲಿಲ್ಲ. ಮಾನಸಿಕವಾಗಿ ತೀವ್ರ ನೊಂದಿರುವ ಭರತನ ಪಾರದರ್ಶಕ ವಿಚಾರಣೆ ನಡೆಯಬೇಕು.
– ಚೇತನ ಮನೇರಿಕರ, ಭರತ ಕುರಣೆ ಪರ ವಕೀಲ.

ಅಮಾಯಕ ಹಿಂದೂ ಯುವಕರ ಬಂಧನ ಖಂಡಿಸಿ ಶಿವಮೊಗ್ಗ, ಉಡುಪಿ ಹಾಗೂ ಮಂಗಳೂರಿನಲ್ಲಿ ಸೆ.4ರಂದು, ಸೆ.5ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ರ್ಯಾಲಿ ಆಯೋಜಿಸಲಾಗಿದೆ. ಸೆ.1ರಂದು ಬೆಳಗಾವಿ ನಗರದ ಧರ್ಮವೀರ ಸಂಭಾಜಿ ಚೌಕ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
– ಋಷಿಕೇಶ ಗುರ್ಜರ, ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕಾರ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.