ಸಿದ್ದು ಮೌನವಾದರೆ ಸರ್ಕಾರ ಸುಸೂತ್ರ

Team Udayavani, Aug 31, 2018, 6:00 AM IST

pti8302018000084b.jpg

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ 100 ದಿನ ಪೂರೈಸಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗುವ ಕುರಿತು ನೀಡುತ್ತಿರುವ ಹೇಳಿಕೆಗಳಿಂದ ಉದ್ಭವಿಸುತ್ತಿರುವ ಗೊಂದಲ, ಕೆಲವು ಶಾಸಕರು ಸಿದ್ದರಾಮಯ್ಯ ಅವರೊಂದಿಗೆ ಗೌಪ್ಯ ಮಾತುಕತೆಗಳನ್ನು ನಡೆಸುತ್ತಿರುವುದು, ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಮೈತ್ರಿಗೆ ಮುಜುಗರವಾಗುವಂತಹ ಹೇಳಿಕೆಗಳನ್ನು ನೀಡುತ್ತಿರುವುದು ಮುಂತಾದ ಅಂಶಗಳನ್ನು ಮುಖ್ಯಮಂತ್ರಿಗಳು ರಾಹುಲ್‌ ಗಾಂಧಿ ಅವರ ಗಮನಕ್ಕೆ ತಂದಿದ್ದಾರೆ ಎಂದು ಮೂಲಗಳು ಹೇಳಿವೆ.

ಸರ್ಕಾರ ರಚನೆಯಾದಾಗಿನಿಂದಲೂ ವಿವಾದಾತ್ಮಕ ಹೇಳಿಕೆ ನೀಡಿ ಗೊಂದಲ ಮೂಡಿಸುವ ಕೆಲಸ ಕೆಲವರಿಂದ ನಿರಂತರವಾಗಿ ನಡೆಯುತ್ತಿದೆ. ಇದರಿಂದಾಗಿ ಸರ್ಕಾರ ಸುಸೂತ್ರವಾಗಿ ಕೆಲಸ ಮಾಡಲು ಆಗುತ್ತಿಲ್ಲ. ಸಿದ್ದರಾಮಯ್ಯ ಸೇರಿದಂತೆ ರಾಜ್ಯ ನಾಯಕರಿಗೆ ತಾಕೀತು ಮಾಡಿ ಎಂದು ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಮನ್ವಯ ಸಮಿತಿ ಸಭೆ ನಿಗದಿ ವಿಚಾರದಲ್ಲಿಯೂ ಅನಗತ್ಯವಾಗಿ ಗೊಂದಲ ಮೂಡಿಸಲಾಯಿತು. ಕೊಡಗು ಜಿಲ್ಲೆಯಲ್ಲಿ ಪ್ರವಾಹ ಉಂಟಾಗಿ ಅನಾಹುತ ಸಂಭವಿಸಿದ್ದರಿಂದ ಇಡೀ ಸರ್ಕಾರ ಅತ್ತ ಗಮನಹರಿಸಿ ಪರಿಹಾರ ಕಾರ್ಯಗಳಲ್ಲಿ ನಿರತವಾಗಿತ್ತು. ಅಂತಹ ಸಂದರ್ಭದಲ್ಲಿ ಸಮನ್ವಯ ಸಮಿತಿ ಸಭೆ ನಡೆಸಲು ಆಗಲಿಲ್ಲ. ಆದರೆ, ಅದನ್ನೇ ದೊಡ್ಡದು ಮಾಡಲಾಯಿತು. ಸಿದ್ದರಾಮಯ್ಯ ಅವರು ಹಾಸನದಲ್ಲಿ ನೀಡಿದ ಹೇಳಿಕೆ ನಂತರ ಕೆಲವು ಶಾಸಕರು ಹಾಗೂ ಸಚಿವರು ತಮ್ಮದೇ ಆದ ಧಾಟಿಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಇದರಿಂದಲೂ ಗೊಂದಲ ಉಂಟಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಚ್‌.ಡಿ. ಕುಮಾರಸ್ವಾಮಿ ಭೇಟಿ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸಹ ಇದ್ದು, ಎಲ್ಲ ವಿಚಾರಗಳ ಬಗ್ಗೆ ಪರಿಲಿಶೀಲಿಸುವಂತೆ ರಾಹುಲ್‌ಗಾಂಧಿ ಸೂಚಿಸಿದರು ಎಂದು ಹೇಳಲಾಗಿದೆ. ಕುಮಾರಸ್ವಾಮಿಯವರು ಹೇಳಿದ ಎಲ್ಲ ವಿಚಾರಗಳನ್ನೂ ಸಮಾಧಾನದಿಂದ ಆಲಿಸಿದ ರಾಹುಲ್‌ಗಾಂಧಿ ಈ ಕುರಿತಂತೆ ರಾಜ್ಯ ನಾಯಕರಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು ಎನ್ನಲಾಗಿದೆ.

ಈ ಮಧ್ಯೆ, ಸರ್ಕಾರಕ್ಕೆ ಸಹಕಾರ ಕೊಟ್ಟಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದೆ. ಈ ವೇಳೆ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳುವಂತೆ ಮನವಿ ಮಾಡಿದ್ದು ಬಿಟ್ಟರೆ ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್‌ ನಾಯಕರು ಮೂಡಿಸುತ್ತಿರುವ ಗೊಂದಲಗಳ ಬಗ್ಗೆ ಅವರು ರಾಹುಲ್‌ ಗಾಂಧಿ ಗಮನಕ್ಕೆ ತಂದಿದ್ದು ನಿಜ ಎಂದು ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ಅವರ ಬಳಿ ಚರ್ಚೆ ಮಾಡುವಂತಹ ಗಂಭೀರ ವಿಚಾರಗಳೇನೂ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ, ಕಾಂಗ್ರೆಸ್‌ ನಾಯಕರನ್ನು ದೂರವಿಟ್ಟು ಪ್ರತ್ಯೇಕವಾಗಿ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿರುವುದರಿಂದ ಈ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ.

ಸರ್ಕಾರ 100 ದಿನ ಪೂರೈಸಿದೆ. ಅಧಿಕಾರ ನಡೆಸುವಲ್ಲಿ ಕಾಂಗ್ರೆಸ್‌ ಅಧ್ಯಕ್ಷರು ಕೊಟ್ಟಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಲು ಭೇಟಿಯಾಗಿದ್ದೇನೆ. ಇದೊಂದು ಸೌಹಾರ್ದಯುತ ಭೇಟಿ. ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ-ಮಂಡಳಿಗಳ ನೇಮಕ ಕುರಿತು ಆದಷ್ಟು ಬೇಗ ತೀರ್ಮಾನ ಕೈಗೊಳ್ಳಿ ಎಂದು ಮನವಿ ಮಾಡಿದ್ದೇನೆ. ಉಳಿದಂತೆ ಬೇರೆ ಯಾವುದೇ ವಿಚಾರ ಚರ್ಚಿಸಿಲ್ಲ ಮತ್ತು ಚರ್ಚಿಸುವ ವಿಚಾರವೂ ಸಮ್ಮಿಶ್ರ ಸರ್ಕಾರದಲ್ಲಿ ಇಲ್ಲ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.