CONNECT WITH US  

ಚಾರ್ಮಾಡಿ ಘಾಟಿ: ಭಾರೀ ವಾಹನ ಸಂಚಾರ ನಿಷೇಧ 

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಎಲ್ಲ ರೀತಿಯ ಭಾರೀ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಆದೇಶಿಸಿದ್ದಾರೆ.

ಶಿರಾಡಿಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿರುವುದರಿಂದ ಎಲ್ಲಾ ವಾಹನಗಳು ಚಾರ್ಮಾಡಿ ಘಾಟಿ ಮೂಲಕ ಸಂಚರಿಸುತ್ತಿದ್ದು ವಾಹನಗಳ ದಟ್ಟಣೆ ಹೆಚ್ಚಾಗಿದ್ದಲ್ಲದೆ ಅಲ್ಲಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿ ರುವುದರಿಂದ ಅಪಾಯಕಾರಿ ಸ್ಥಿತಿಯಿಂದ ಸಾರ್ವಜನಿಕರಿಗೆ ಪ್ರಯಾಣ
ಕಷ್ಟಕರವಾಗುತ್ತಿದೆ.

ಹೀಗಾಗಿ ಸಾರ್ವಜನಿಕ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 234ರ ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ- ಚಾರ್ಮಾಡಿ ಘಾಟ್‌ ಮಾರ್ಗದ ಮೂಲಕ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.


Trending videos

Back to Top