ದೆಹಲಿಗೆ ಸಿದ್ದರಾಮಯ್ಯ ಶಿಫ್ಟ್

Team Udayavani, Sep 2, 2018, 6:00 AM IST

ban02091801medn-r.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೇಲೆ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯಂತ್ರಣ ತಪ್ಪಿಸಲು ಅವರನ್ನು ರಾಷ್ಟ್ರ ರಾಜಕಾರಣಕ್ಕೆ “ಸಾಗ’ ಹಾಕುವ ಕಾರ್ಯತಂತ್ರ ರೂಪಿಸಲಾಗಿದೆ. ಸಿದ್ದರಾಮಯ್ಯ ಅವರಿಂದ ದೋಸ್ತಿ ಸರ್ಕಾರಕ್ಕೆ ಆಗಬಹುದಾದ ತೊಂದರೆ ತಪ್ಪಿಸುವುದು ಮತ್ತು ಅವರನ್ನು ಗೌರವಪೂರ್ವಕವಾಗಿ ಹಣಿಯಲು ಇಂಥದ್ದೊಂದು  ಪ್ರಸ್ತಾಪವನ್ನು ರಾಜ್ಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ಮುಂದಿಟ್ಟಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು  ಎಐಸಿಸಿ ಸ್ಟಾರ್‌ ಪ್ರಚಾರಕರನ್ನಾಗಿ ಮಾಡುವುದು. ಆ ನಂತರ ಒತ್ತಾಯಪೂರ್ವಕವಾಗಿ ಕಣಕ್ಕಿಳಿಸುವುದು, ಆ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ ಕೋರುವುದು ಕಾರ್ಯತಂತ್ರದ ಭಾಗ. ಜತೆಗೆ ಸಿದ್ದರಾಮಯ್ಯ ಅವರಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ  ತೀವ್ರ ಒತ್ತಡದಲ್ಲಿ ಕೆಲಸಮಾಡುವಂತಾಗಿದ್ದು, ಅದನ್ನು ನಿವಾರಿಸುವುದು ಇದರ ಮೂಲ ಉದ್ದೇಶ.

ಸಿದ್ದರಾಮಯ್ಯ ಅವರು ಯೂರೋಪ್‌ ಪ್ರವಾಸ ಮುಗಿಸಿ ಬರುತ್ತಿದ್ದಂತೆ ಅವರನ್ನು ದೆಹಲಿಗೆ ಕರೆಸಿಕೊಂಡು ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿಯವರು  ಈ ಕುರಿತು ಮಾತುಕತೆ ನಡೆಸಲಿದ್ದಾರೆ. ಜತೆಗೆ, ಇನ್ಮುಂದೆ ಸಮ್ಮಿಶ್ರ ಸರ್ಕಾರ ಆಸ್ಥಿರಗೊಳಿಸುವಂತಹ ಹೇಳಿಕೆ ಕೊಡುವುದು, ಶಾಸಕರ ಪ್ರತ್ಯೇಕ ಸಭೆ ನಡೆಸುವುದು. ಬೆಂಬಲಿಗರ ಮೂಲಕ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಹೇಳಿಕೆ ಕೊಡಿಸುವುದಕ್ಕೆ “ಬ್ರೇಕ್‌’ ಹಾಕುವಂತೆ ಕಠಿಣವಾಗಿಯೇ ಸೂಚನೆ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮೊದಲ ಹಂತದ ನಿಗಮ-ಮಂಡಳಿಗಳ ನೇಮಕ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರೂ ಆಗಿರುವ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ಅನಗತ್ಯ ಹೇಳಿಕೆಗಳಿಂದ  ಗೊಂದಲ, ಅನುಮಾನ ಹೆಚ್ಚಾಗುತ್ತಿದೆ. ಇದು ಸಿದ್ದರಾಮಯ್ಯ ಅವರ ಸುತ್ತಲೇ ತಿರುಗುತ್ತಿದೆ. ಹೀಗಾಗಿ, ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಇಲ್ಲದಿಲ್ಲ ಎಂದು ರಾಹುಲ್‌ಗಾಂಧಿಯವರಿಗೆ ಕಾಂಗ್ರೆಸ್‌ ನಾಯಕರೇ ವರದಿ ನೀಡಿದ್ದಾರೆ.

ಜತೆಗೆ, ಇತ್ತೀಚೆಗೆ ರಾಹುಲ್‌ಗಾಂಧಿ ಭೇಟಿ ಮಾಡಿದ್ದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮಾಹಿತಿ ಕೊಟ್ಟು ಬಂದಿದ್ದಾರೆ. ಹೀಗಾಗಿ, ಅಂತಿಮವಾಗಿ ಸಿದ್ದರಾಮಯ್ಯಅವರಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ತಪ್ಪಿಸಲು ಹೈಕಮಾಂಡ್‌ ಸರಳ ಸೂತ್ರ ಸಿದ್ಧಪಡಿಸಿಕೊಂಡಿದೆ.

ತಂತ್ರವೇನು?
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಎದುರಿಸಲು ರಾಷ್ಟ್ರಮಟ್ಟದಲ್ಲಿ ವರ್ಚಸ್ವಿ ನಾಯಕರ ಅಗತ್ಯವಿದ್ದು, ವಾಗಾœಳಿ ನಡೆಸಲು ಸಿದ್ದರಾಮಯ್ಯ ಸೂಕ್ತ ಎಂದು ಹೇಳಿ ಸ್ಟಾರ್‌ ಪ್ರಚಾರಕ ಪಟ್ಟ ನೀಡಿ ಕರೆಸಿಕೊಳ್ಳುವುದು. ಜತೆಗೆ ಒತ್ತಾಯಪೂರ್ವಕವಾಗಿ ಲೋಕಸಭೆ ಚುನಾವಣೆಗೆ ಕೊಪ್ಪಳ ಅಥವಾ ಬಾಗಲಕೋಟೆ ಕ್ಷೇತ್ರಗಳಿಂದ  ನಿಲ್ಲಿಸುವುದು ಸರಳ ಸೂತ್ರದ ತಂತ್ರ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಅವರೊಬ್ಬರನ್ನೇ ಲೋಕಸಭೆ ಚುನಾವಣೆ ಕಣಕ್ಕಿಳಿಸಿದರೆ ಬೇರೆ ರೀತಿಯ ಸಂದೇಶ ಹೋಗಬಹುದು ಎಂಬ ಕಾರಣಕ್ಕೆ ಇನ್ನೂ ಹಲವರ ಹೆಸರು ಪರಿಶೀಲನೆಯಲ್ಲಿದೆ.  ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿರುವ ಕೃಷ್ಣ ಬೈರೇಗೌಡ ಹಾಗೂ ವಿಜಯನಗರ ಶಾಸಕ ಎಂ.ಕೃಷ್ಣಪ್ಪ, ಶಿವಾಜಿನಗರ ಶಾಸಕ ರೋಷನ್‌ಬೇಗ್‌ ಅವರ ಹೆಸರು ಲೋಕಸಭೆ ಚುನಾವಣೆಗೆ ಕಣಕ್ಕಿಳಿಸಲು ಪರಿಶೀಲನೆಯಲ್ಲಿದೆ.

ಕೃಷ್ಣ ಬೈರೇಗೌಡ ಅವರನ್ನು ಬೆಂಗಳೂರು ಉತ್ತರ ಅಥವಾ ಚಿಕ್ಕಬಳ್ಳಾಪುರ, ಎಂ.ಕೃಷ್ಣಪ್ಪ ಅವರನ್ನು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ , ರೋಷನ್‌ಬೇಗ್‌ ಅವರನ್ನು ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಚಿಂತನೆಯಿದೆ.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿ ಹೆಚ್ಚು ಸೀಟು ಗೆಲ್ಲುವ ಗುರಿ ಹೊಂದಿರುವ ರಾಹುಲ್‌ಗಾಂಧಿ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವಂತೆ ಸೂಚನೆ ನೀಡಿದ್ದಾರೆ ಎಂಬ ನೆಪವೊಡ್ಡಿ ಸಿದ್ದರಾಮಯ್ಯ ಸೇರಿದಂತೆ ಪ್ರಭಾವಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗುತ್ತದೆ ಎಂದು ಹೇಳಲಾಗಿದೆ.

ಮೈಸೂರು ಕ್ಷೇತ್ರದಿಂದಲೇ ಸಿದ್ದರಾಮಯ್ಯ ಅವರನ್ನು ಕಣಕ್ಕಿಳಿಸಬಹುದು ಎಂಬ ಲೆಕ್ಕಾಚಾರವೂ ಇತ್ತಾದರೂ ಚಾಮುಂಡೇಶ್ವರಿ ಚುನಾವಣೆಯ ಸೋಲಿನ ನಂತರ ಮೈಸೂರಿನಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ಒಪ್ಪುವ ಸಾಧ್ಯತೆ ಕಡಿಮೆ. ಹೀಗಾಗಿ, ಕೊಪ್ಪಳ ಅಥವಾ ಬಾಗಲಕೋಟೆ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸಲು ಚರ್ಚೆ ನಡೆದಿದೆ.

ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಸಾಗ ಹಾಕಿ ಸಮ್ಮಿಶ್ರ ಸರ್ಕಾರ ಐದು ವರ್ಷ ಸುಭದ್ರಗೊಳಿಸುವುದು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸಚಿವ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಅವರಿಗೆ ರಾಜ್ಯದ ಉಸ್ತುವಾರಿ ವಹಿಸುವ ಲೆಕ್ಕಾಚಾರದೊಂದಿಗೆ  ಈ ತಂತ್ರ ರೂಪಿಸಲಾಗಿದೆ ಎಂದು ಹೇಳಲಾಗಿದೆ.

ಹೈಕಮಾಂಡ್‌ ಲೆಕ್ಕಾಚಾರ
ಸಿದ್ದರಾಮಯ್ಯ ಅವರ ಸೇವೆ ರಾಷ್ಟ್ರ ರಾಜಕಾರಣಕ್ಕೆ ಅಗತ್ಯವಿದೆ. ಅವರು ಕಾಂಗ್ರೆಸ್‌ನ ವರ್ಚಸ್ವೀ ನಾಯಕರು ಎಂದು ಸ್ಟಾರ್‌ ಪ್ರಚಾರಕರ ಪಟ್ಟ ನೀಡಿ ಕರೆಸಿಕೊಂಡರೆ ಕುರುಬ ಸಮುದಾಯ ಹಾಗೂ ಅವರ ಬೆಂಬಲಿಗರಲ್ಲೂ ಅಸಮಾಧಾನ ಉಂಟಾಗುವುದಿಲ್ಲ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದರಿಂದ ಕೊಪ್ಪಳ ಅಥವಾ ಬಾಗಲಕೋಟೆ ಕ್ಷೇತ್ರದಿಂದ ಅವರನ್ನು ಗೆಲ್ಲಿಸಲು ಕಷ್ಟವಾಗದು. ಲೋಕಸಭೆಗೆ ಆಯ್ಕೆಯಾದರೆ ಸಮ್ಮಿಶ್ರ ಸರ್ಕಾರದ ಮೇಲೆ ಸಿದ್ದರಾಮಯ್ಯ ಅವರ ಹಿಡಿತ ತನ್ನಿಂತಾನೆ ಕಡಿಮೆಯಾಗುತ್ತದೆ ಎಂಬ ಲೆಕ್ಕಾಚಾರ ಹೈಕಮಾಂಡ್‌ನ‌ದು.

– ಎಸ್‌. ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.