ಕೆಪಿಸಿಸಿಯಲ್ಲಿ ಬೆಳಗಾವಿ ರಂಪಾಟ

Team Udayavani, Sep 2, 2018, 6:00 AM IST

kpcc.jpg

ಬೆಂಗಳೂರು: ಲೋಕಸಭೆ ಚುನಾವಣೆ ತಯಾರಿ, ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಬೆಳಗಾವಿಯ ಸಮಸ್ಯೆಯದೇ ದೊಡ್ಡ ರಂಪಾಟ ಸೃಷ್ಟಿಯಾಯಿತು. ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ -ಉಪಾಧ್ಯಕ್ಷ ಆಯ್ಕೆ ವಿಚಾರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್‌ ಹಾಗೂ ಜಾರಕಿಹೊಳಿ ಸಹೋದರರ ನಡುವೆ ಉಂಟಾಗಿದ್ದ ವೈಮನಸ್ಯ ಸಭೆಯಲ್ಲೂ ಪ್ರತಿಧ್ವನಿಸಿ ಎರಡೂ ಕಡೆಯವರನ್ನು ಸಮಾಧಾನಪಡಿಸಲು ಎಐಸಿಸಿ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಹರಸಾಹಸ ಪಡುವಂತಾಯಿತು.

ಬೆಳಗಾವಿ ಗಲಾಟೆ ಕೆಪಿಸಿಸಿ ಕಚೇರಿಯಿಂದ ಕುಮಾರಕೃಪ ಅತಿಥಿಗೃಹಕ್ಕೆ ಶಿಫ್ಟ್ ಆಗಿ ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್‌ ಅವರನ್ನು ಕೆಪಿಸಿಸಿ ಕಚೇರಿಯಲ್ಲೇ ಇರುವಂತೆ ಸೂಚಿಸಿ, ಸಚಿವ ರಮೇಶ್‌ಜಾರಕಿಹೊಳಿ ಅವರನ್ನು ಕೆಕೆ ಗೆಸ್ಟ್‌ ಗೌಸ್‌ಗೆ ಕರೆದು ವೇಣುಗೋಪಾಲ್‌ ಮಾತುಕತೆ ನಡೆಸಿದರು. ಲಕ್ಷ್ಮಿ ಹೆಬ್ಟಾಳ್ಕರ್‌ ಅವರ ಜತೆಗೂ ಪ್ರತ್ಯೇಕ ಮಾತುಕತೆ ನಡೆಸಿದರು. ಇಷ್ಟೆಲ್ಲಾ ಬೆಳವಣಿಗೆಗಳು ನಡೆಯುತ್ತಿದ್ದರೂ ಮಾಜಿ ಸಚಿವ ಸತೀಶ್‌ ಜಾರಕೊಹೊಳಿ ಗೈರು ಹಾಜರಾಗಿ ಸಭೆಯಿಂದ ದೂರ ಉಳಿದಿದ್ದರು. ಈ ಮೂಲಕ ಹೈಕಮಾಂಡ್‌ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದರು.

ಮತ್ತೂಂದೆಡೆ ಬೆಳಗಾವಿ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಸಂಬಂಧ ಸಚಿವ ರಮೇಶ್‌ ಜಾರಕಿಹೊಳಿ ಹಾಗೂ ಮಾಜಿ ಶಾಸಕ ಫಿರೋಜ್‌ ಸೇs… ನಡುವೆ ಮಾತಿನ ಚಕಮಕಿಯೂ ನಡೆಯಿತು.   ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಕೊಡಬೇಕು ಎಂದು ಫಿರೋಜ್‌ ಸೇs… ಒತ್ತಾಯಿಸಿದರೆ ಇದಕ್ಕೆ ರಮೇಶ್‌ ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿ ನನಗಾಗಲಿ ಅಥವಾ ನನ್ನ ಸಹೋದರನಿಗಾಗಲಿ ಟಿಕೆಟ್‌ ಕೊಡಿ ಎಂದು ಪಟ್ಟು ಹಿಡಿದರು.  ಇದೇ ವಿಚಾರವಾಗಿ ಇಬ್ಬರೂ ನಾಯಕರ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಕೂಗಾಟದ ನಡುವೆಯೇ ಜಿಲ್ಲಾ ನಾಯಕರು ಸಭೆಯಿಂದ ಹೊರಗೆ ಬಂದರು.

ಇದರ ಗಲಾಟೆಯೇ ಹೆಚ್ಚಾಗಿ ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ-ಉಪಾಧ್ಯಕ್ಷರ ವಿಚಾರ ಚರ್ಚೆಗೆ ಬರಲಿಲ್ಲ. ಸದ್ಯಕ್ಕೆ ಆ ವಿಷಯ ಬೇಡ ಎಂದು ಶಾಸಕರಿಗೆ ನಾಯಕರು ಸೂಚನೆ ನೀಡಿದರು.

ಡಿಕೆಶಿ ಎಂಟ್ರಿ
ಸಚಿವ ಡಿ.ಕೆ.ಶಿವಕುಮಾರ್‌ ಬೆಳಗಾವಿ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದು ಚರ್ಚೆಗೆ ಗ್ರಾಸವಾಯಿತು. ಲಕ್ಷ್ಮಿ ಹೆಬ್ಟಾಳ್ಕರ್‌ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಗುಂಪಿನ ನಡುವೆ ವಾಗ್ವಾದ ಹೆಚ್ಚಾಗಿ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದ್ದರಿಂದ ಡಿ.ಕೆ.ಶಿವಕುಮಾರ್‌ ಕೆಪಿಸಿಸಿ ಕಚೇರಿಗೆ ಆಗಮಿಸಿದರು. ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಉಸ್ತುವಾರಿ ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರೊಂದಿಗೆ ಬೆಳಗಾವಿ ಸಮಸ್ಯೆ ಬಗೆಹರಿಸಲು ರಾಜಿ ಸಂಧಾನ ಮಾತುಕತೆ ಕಸರತ್ತು ಸಹ ನಡೆಯಿತು. ಆದರೆ, ಇದ್ಯಾವುದೂ ಫ‌ಲ ಕೊಡದ ಕಾರಣ ಬೆಳಗಾವಿ ಸಭೆ ಮುಂದೂಡಲಾಯಿತು.

ಬೆಳಗಾವಿ ಕೈ ಸಮಸ್ಯೆ ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ ಕಾಂಗ್ರೆಸ್‌ ಬೆಳಗಾವಿ ಜಿಲ್ಲಾ ಘಟಕದಲ್ಲಿ ಉಂಟಾಗಿರುವ ಸಂಘರ್ಷದ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಗಮನಹರಿಸಲಿದ್ದು, ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ನ ಗೊಂದಲ ಪಕ್ಷದ ಆಂತರಿಕ ವಿಚಾರವಾಗಿದ್ದು, ಪಕ್ಷದ ಅಧ್ಯಕ್ಷರೇ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ವಿವಾದ ಬಗೆಹರಿಸಲಾಗುವುದು ಎಂದು ತಿಳಿಸಿದರು. ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಮುಖಂಡರಾದ ಲಕ್ಷ್ಮೀ ಹೆಬ್ಟಾಳ್ಕರ್‌ ಶುಕ್ರವಾರ ತಮ್ಮನ್ನು ಭೇಟಿಯಾಗಿದ್ದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಭೇಟಿಗೂ ವಿವಾದಕ್ಕೂ ಸಂಬಂಧ ಇಲ್ಲ. ಸ್ಥಳೀಯ ಸಂಸ್ಥೆ ಮೀಸಲಾತಿ ಕುರಿತಂತೆ ಚರ್ಚಿಸಲು ಅವರು ಬಂದಿದ್ದರು ಎಂದು ಹೇಳಿದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.