ಹೆಬ್ಬಾಳ್ಕರ್ V/S ಜಾರಕಿಹೊಳಿ : ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವು
Team Udayavani, Sep 2, 2018, 1:15 PM IST
ಬೆಳಗಾವಿ: ಪಿಎಲ್ಡಿ ಬ್ಯಾಂಕ್ ಚುನಾವಣೆ ಮುಂದೂಡಿಕೆಯಾದ ಬಳಿಕ ಸ್ಫೋಟಗೊಂಡಿದ್ದ ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವಿನ ತಾರಕಕ್ಕೇರಿರುವ ಕಚ್ಚಾಟ ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ತಲೆನೋವು ತಂದಿಟ್ಟಿದೆ.
ಈಗಾಗಲೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಾರಕಿಹೊಳಿ ಸಹೋದರರಾದ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಬಹಿರಂಗವಾಗಿ ಮಾಧ್ಯಮಗಳ ಎದುರು ಅಸಮಾಧಾನ ಹೊರ ಹಾಕಿದ್ದಾರೆ.
ಇನ್ನೊಂದೆಡೆ ಸಚಿವ ಸಚಿವ ರಮೇಶ ಜಾರಕಿಹೊಳಿ ನೀಡಿರುವ ‘ಕಾಲ ಕಸ’ ಹೇಳಿಕೆ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಪ್ರತಿಷ್ಠೆಯನ್ನು ಪಣಕ್ಕಿಟ್ಟಿರುವ ಪ್ರಭಾವಿ ನಾಯಕರ ಹೋರಾಟ ಕಾಂಗ್ರೆಸ್ ನಾಯಕರಿಗೆ ತಲೆನೋವು ತಂದಿಟ್ಟಿದ್ದು ಸಮಸ್ಯೆ ಬಗೆ ಹರಿಸಲು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸಂಧಾನ ಕಾರರನ್ನಾಗಿ ಕೆಪಿಸಿಸಿ ನೇಮಿಸಿದೆ.
ಇನ್ನೊಂದೆಡೆ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ತಾರದಂತೆ ಪಕ್ಷದ ನಾಯಕರಿಗೆ ಹೈಕಮಾಂಡ್ ಎಚ್ಚರಿಕೆಯನ್ನೂ ನೀಡಿದೆ.
ನಾವೇ ಬಗೆ ಹರಿಸಿಕೊಳ್ಳುತ್ತೇವೆ
ಶಾಸಕ ಸತೀಶ್ ಜಾರಕಿಹೊಳಿ ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ. ಯಾರ ಮಧ್ಯ ಪ್ರವೇಶವೂ ಬೇಡ ಎಂದು ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ಅಸಮಾಧಾನ ಎಲ್ಲಾ ಕಡೆ ಇರುತ್ತದೆ. ಎಲ್ಲಾ ಜಿಲ್ಲೆಗಳಲ್ಲೂ ಬಣಗಳಿರುತ್ತವೆ. ಚುನಾವಣೆ ಬಂದಾಗ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ