ಸ್ಥಳೀಯ ಸಂಸ್ಥೆ ಚುನಾವಣೆ: ಇಂದು ಫಲಿತಾಂಶ
Team Udayavani, Sep 3, 2018, 6:00 AM IST
ಬೆಂಗಳೂರು: ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಸೆ. 3ರಂದು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳಲಿದೆ. ರಾಜ್ಯ ಚುನಾವಣ ಆಯೋಗದ ಮಾರ್ಗದರ್ಶನ ದಂತೆ ಮತ ಎಣಿಕೆ ಕಾರ್ಯಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಂಡಿದೆ. ಬೆಳಗ್ಗೆ 8ರಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಪಕ್ಷವಾರು ಗೆದ್ದ ಅಭ್ಯರ್ಥಿಗಳ ಚಿತ್ರಣ ಸ್ಪಷ್ಟವಾಗಲಿದೆ.
ಮಹಾನಗರ ಪಾಲಿಕೆಗಳ ಚುನಾವಣೆಯ ಮತ ಎಣಿಕೆ ಕಾರ್ಯ ಜಿಲ್ಲಾ ಕೇಂದ್ರಗಳಲ್ಲಿ ನಡೆದರೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ನಿಯೋಜಿಸಲ್ಪಟ್ಟ ಸಿಬಂದಿಗೆ ಈಗಾಗಲೇ ತರಬೇತಿ ಕೊಡಲಾಗಿದೆ. ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳಲಾಗಿದೆ. ಮತ ಎಣಿಕೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಗರಿಷ್ಠ 13 ಸುತ್ತುಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೈಸೂರು, ತುಮಕೂರು, ಶಿವಮೊಗ್ಗ ಮಹಾ ನಗರಪಾಲಿಕೆಗಳ ಒಟ್ಟು 135 ವಾರ್ಡ್ಗಳಿಗೆ ಹಾಗೂ 29 ನಗರಸಭೆ, 53 ಪುರಸಭೆ ಮತ್ತು 20 ಪಟ್ಟಣ ಪಂಚಾಯತ್ಗಳ ಸಹಿತ ಒಟ್ಟು 102 ನಗರ ಸ್ಥಳೀಯ ಸಂಸ್ಥೆಗಳ 2,497 ವಾರ್ಡ್ಗಳಿಗೆ ಆ.31ರಂದು ಮತದಾನ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ