ಬೆಳಗಾವಿಯಲ್ಲಿ ಪಕ್ಷೇತರರದ್ದೇ ಮೇಲುಗೈ

Team Udayavani, Sep 4, 2018, 6:20 AM IST

ramesh.jpg

ಬೆಳಗಾವಿ: ಜಿಲ್ಲೆಯಲ್ಲಿ ಎರಡು ನಗರಸಭೆ, 10 ಪುರಸಭೆ ಮತ್ತು 2 ಪ.ಪಂ.ಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷೇತರರು ಅಧಿಕ ಸ್ಥಾನಗಳಲ್ಲಿ ಜಯಗಳಿಸಿ ಗಮನ ಸೆಳೆದಿದ್ದು, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ ನಾಲ್ಕು ಕಡೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿದಿವೆ.

14 ನಗರ ಸ್ಥಳೀಯ ಸಂಸ್ಥೆಗಳ 343 ವಾರ್ಡುಗಳ ಪೈಕಿ 14 ಕಡೆಗಳಲ್ಲಿ ಅವಿರೋಧ ಆಯ್ಕೆ ನಡೆದಿತ್ತು. ಒಟ್ಟಾರೆ
ಫಲಿತಾಂಶದಲ್ಲಿ ಪಕ್ಷೇತರ ಅಭ್ಯರ್ಥಿಗಳು 144 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

ಬಿಜೆಪಿಯ 104 ಅಭ್ಯರ್ಥಿಗಳು ಜಯಗಳಿಸಿ 2ನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್‌ 85 ಸ್ಥಾನಗಳಿಸಿ 3ನೇ ಸ್ಥಾನಕ್ಕೆ
ತೃಪ್ತಿಪಟ್ಟಿದೆ. ಜೆಡಿಎಸ್‌ ಅಭ್ಯರ್ಥಿಗಳು ಕೇವಲ 10 ಕಡೆ ಮಾತ್ರ ಜಯಗಳಿಸಿ ಮುಖಭಂಗ ಅನುಭವಿಸಿದ್ದಾರೆ.

ಸಂಕೇಶ್ವರ ಪುರಸಭೆ ಹಾಗೂ ನಿಪ್ಪಾಣಿ ನಗರಸಭೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ನಾಲ್ಕು ಕಡೆ ಪಕ್ಷೇತರರು ಅಧಿಕ ಸಂಖ್ಯೆಯಲ್ಲಿ ಜಯಗಳಿಸಿ ಅಧಿಕಾರ ಹಿಡಿಯುತ್ತಿದ್ದಾರೆ. ಗೋಕಾಕ ನಗರಸಭೆಯಲ್ಲಿ ಸಚಿವ ರಮೇಶ ಜಾರಕಿಹೊಳಿ ಬೆಂಬಲಿತ ಗುಂಪು ಮೇಲುಗೈ ಸಾಧಿಸಿದೆ. ಅದೇ ಕೊಣ್ಣೂರ ಪುರಸಭೆಯಲ್ಲಿ ಸಹ ರಮೇಶ ಜಾರಕಿಹೊಳಿ ಗುಂಪು ಮತ್ತೆ ಅಧಿಕಾರಕ್ಕೆ ಬಂದಿದೆ.

ಚಿಕ್ಕೋಡಿ ಪುರಸಭೆಯಲ್ಲಿ ಬಿಜೆಪಿ ಬೆಂಬಲಿತ ಗುಂಪು ಅಧಿಕಾರ ಹಿಡಿದಿದೆ. ಕಳೆದ ಬಾರಿ ಇಲ್ಲಿ ಕಾಂಗ್ರೆಸ್‌ ಗುಂಪು ಅಧಿಕಾರ ನಡೆಸಿತ್ತು. ಖಾನಾಪುರದಲ್ಲಿ ಸಹ ಪಕ್ಷೇತರರ ಗುಂಪು ಮರಳಿ ಅಧಿಕಾರ ಹಿಡಿಯಲಿದೆ. ಇಲ್ಲಿ ಕಾಂಗ್ರೆಸ್‌ ಹೆಸರಿನಲ್ಲಿ ಸ್ಪರ್ಧೆ ಮಾಡಿರಲಿಲ್ಲ. ಬಿಜೆಪಿ ಕೇವಲ ಮೂರು ಕಡೆ ಮಾತ್ರ ಸ್ಪರ್ಧೆ ಮಾಡಿದ್ದು, ಎಲ್ಲರಲ್ಲೂ ಸೋತಿದೆ.

ನಿಪ್ಪಾಣಿ ನಗರಸಭೆಯಲ್ಲಿ ಯಾರಿಗೂ ಸ್ಪಷ್ಟಬಹುಮತ ಬರದೇ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ಒಟ್ಟು 31 ಸ್ಥಾನಗಳ
ಪೈಕಿ 13 ಸ್ಥಾನಗಳಿಸಿ ಅತಿ ದೊಡ್ಡ ಪಕ್ಷವಾಗಿರುವ ಬಿಜೆಪಿ ಆರು ಸ್ಥಾನಗಳಿಸಿರುವ ಪಕ್ಷೇತರರ ಮೇಲೆ ಅವಲಂಬಿಸುವಂತಾಗಿದೆ. ಪಕ್ಷೇತರರಲ್ಲಿ ಕೆಲವರು ಬಿಜೆಪಿ ಬೆಂಬಲಿತರಾಗಿರುವುದರಿಂದ ಅಧಿಕಾರ ರಚನೆಗೆ ಯಾವುದೇ ಸಮಸ್ಯೆ ಕಾಣುತ್ತಿಲ್ಲ. ಸಂಕೇಶ್ವರ ಪುರಸಭೆಯಲ್ಲೂ ಅತಂತ್ರ ಸ್ಥಿತಿ ನಿರ್ಮಾಣ ಆಗಿದೆ. ಒಟ್ಟು 23 ಸದಸ್ಯರ ಪೈಕಿ ಕಾಂಗ್ರೆಸ್‌ ಹಾಗೂ ಬಿಜೆಪಿ ತಲಾ 11 ಸ್ಥಾನ ಗಳಿಸಿದ್ದು, ಒಂದು ಕಡೆ ಜಯಗಳಿಸಿರುವ ಪಕ್ಷೇತರ ಅಭ್ಯರ್ಥಿನಿರ್ಣಾಯಕರಾಗಿದ್ದಾರೆ.

ಕಳೆದ ಚುನಾವಣೆಯಲ್ಲಿ ಸಹ ಪಕ್ಷೇತರರೇ ಮೇಲುಗೈ ಸಾಧಿಸಿದ್ದು, ಏಳು ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಬೆಂಬಲಿತರಾಗಿ ಅಧಿಕಾರ ರಚನೆ ಮಾಡಿದ್ದರು. ಬಿಜೆಪಿ ಐದು ಕಡೆ ಬಹುಮತ ಪಡೆದು ಅಧಿಕಾರ ಮಾಡಿದ್ದರೆ ಕಾಂಗ್ರೆಸ್‌ ಎರಡು ಕಡೆ ಬಹುಮತ ಗಳಿಸಿತ್ತು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.