ಮಳೆ ಕೊರತೆಯಾದ ಜಿಲ್ಲೆಗಳಲ್ಲಿ ಮೋಡ ಬಿತ್ತನೆ 

Team Udayavani, Sep 5, 2018, 6:00 AM IST

26.jpg

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಉದ್ಭವಿಸಿರುವ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡುವ ಕುರಿತು ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದ್ದಾರೆ. ಅದೇ ರೀತಿ, ತಾವು ಉಸ್ತುವಾರಿ ಸಚಿವರಾಗಿರುವ ರಾಯಚೂರು ಸೇರಿ ತೀವ್ರ ಮಳೆ ಕೊರತೆಯಾಗಿರುವ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸುವ ಬಗ್ಗೆಯೂ ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಕೊರತೆಯಾಗಿರುವ ಹೈದರಾಬಾದ್‌ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಆದರೆ, ಈವರೆಗೆ ಚರ್ಚೆ ನಡೆದಿಲ್ಲ. ಕಳೆದ ವರ್ಷ ಮೋಡ ಬಿತ್ತನೆ ಮಾಡಿದ ಪ್ರದೇಶಗಳಲ್ಲಿ ಯಾವ ರೀತಿ ಪರಿಣಾಮ ಬೀರಿದೆ ಎಂಬುದನ್ನು ತಿಳಿದುಕೊಂಡು ಸಂಪುಟ ಉಪಸಮಿತಿ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದರು. ಅದೇ ರೀತಿ, 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯಿದ್ದು, ಅಂತಹ ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಿ ಪರಿಹಾರ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ. ಈ ಬಗ್ಗೆಯೂ ಸಂಪುಟ ಉಪಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು. ಅಗತ್ಯ ಬಿದ್ದರೆ ಮುಂದಿನ ಸಭೆಯಲ್ಲೇ ಬರಪೀಡಿತ ಜಿಲ್ಲೆಗಳನ್ನು ಘೋಷಣೆ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದರು. ಹಾಲಿನ ದರ ಏರಿಕೆ ಕುರಿತು ಊಹಾಪೋಹಗಳು ಕೇಳಿ ಬರುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಹಾಲಿನ ದರ ಏರಿಕೆ ಆಲೋಚನೆಯೂ ಇಲ್ಲ, ಆ ಕುರಿತ ಪ್ರಸ್ತಾವನೆಯೂ ಸರ್ಕಾರದ ಮುಂದಿಲ್ಲ. ಈ ಕುರಿತು ಆರಂಭಿಕ ಚರ್ಚೆಯೂ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ರೈತರಿಗಾದರೂ ಡೀಸೆಲ್‌ ಸಬ್ಸಿಡಿ ಕೊಡಲಿ:
ಪೆಟ್ರೋಲ್‌ ಮತ್ತು ಡೀಸೆಲ್‌ ದರ ಪದೇಪದೆ ಏರಿಕೆಯಾಗುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಕೇಂದ್ರ ಸರ್ಕಾರ ಯಾವ ರೀತಿ ಕೆಲಸ
ಮಾಡುತ್ತಿದೆ ಎಂಬುದು ಜನರಿಗೆ ಈಗ ಅರ್ಥವಾಗುತ್ತಿದೆ. ಇದರಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಕನಿಷ್ಠ ರೈತರಿಗಾದರೂ ಸಬ್ಸಿಡಿ ದರದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು. ಕೊಡಗಿನಲ್ಲಿ ಜಾನುವಾರು ವಿತರಿಸಲು ಚಿಂತನೆ ಕೊಡಗಿನಲ್ಲಿ ಭಾರೀ ಪ್ರವಾಹದಿಂದ ಜಾನುವಾರುಗಳು ಮೃತಪಟ್ಟಿದ್ದು, ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೃತಪಟ್ಟ ಜಾನುವಾರುಗಳಿಗೆ ಪರಿಹಾರದ ಬದಲು ಜಾನುವಾರುಗಳನ್ನೇ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು. ಸಾಮಾನ್ಯವಾಗಿ ಅನಾಹುತಗಳಲ್ಲಿ ಜಾನುವಾರುಗಳು ಮೃತಪಟ್ಟಾಗ 10 ಸಾವಿರ ರೂ. ಪರಿಹಾರ ನೀಡುವ ನಿಯಮವಿದೆ. ಆದರೆ, ಕೊಡಗು ದುರಂತ ವಿಶೇಷ ಪ್ರಕರಣವಾಗಿದ್ದರಿಂದ ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಪರಿಹಾರ ನೀಡಬೇಕೇ ಅಥವಾ ಜಾನುವಾರುಗಳನ್ನೇ ಕೊಡಬೇಕೇ ಎಂಬುದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಪ್ರಕೃತಿ ವಿಕೋಪದಲ್ಲಿ ಸಾವನ್ನಪ್ಪಿದ ಜಾನುವಾರುಗಳ ಬಗ್ಗೆ ಕೊಡಗು ಜಿಲ್ಲಾಧಿಕಾರಿಗಳಿಂದ ವರದಿ ಕೇಳಲಾಗಿದೆ. ವರದಿ ಬಂದ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.