CONNECT WITH US  

ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲ್ಲ: ಆನಂದ್‌ಸಿಂಗ್‌

ಬಳ್ಳಾರಿ: ವಿಧಾನಸಭಾ ಚುನಾವಣೆ ನಡೆದು ಇನ್ನೂ ನಾಲ್ಕೂವರೆ ವರ್ಷ ಅಧಿಕಾರ ಇರುವಾಗಲೇ ಹೊಸಪೇಟೆ ಶಾಸಕ ಬಿ.ಎಸ್‌. ಆನಂದ್‌ ಸಿಂಗ್‌ ತಾವು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ ಎಂದು ಘೋಷಿಸಿದ್ದಾರೆ. ಹೊಸಪೇಟೆ ನಗರದ ಸಹಕಾರಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಅಧ್ಯಕ್ಷ ಗುಜ್ಜಲನಿಂಗಪ್ಪ ನೇತೃತ್ವದಲ್ಲಿ ನೂತನ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಅವರು ತಮ್ಮ ನಿರ್ಧಾರ ಪ್ರಕಟಿಸಿದರು.

ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ ನಾನು ಮುಂದಿನ ನಾಲ್ಕೂವರೆ ವರ್ಷಗಳ ಕಾಲ ಮಾತ್ರ ಶಾಸಕನಾಗಿ ಮುಂದುವರಿಯಲಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸದೆ, ಸಕ್ರಿಯ ರಾಜಕಾರಣಿಯಾಗಿ ಮುಂದುವರಿಯುತ್ತೇನೆ. ಯಾರೂ ಅನ್ಯಥಾ ಭಾವಿಸಬಾರದು. ನಾನು ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿ ಹ್ಯಾಟ್ರಿಕ್‌ ಸಾಧಿಸಬೇಕೆಂದು ಪಣತೊಟ್ಟಿದ್ದೆ. ಅದನ್ನು ಮತದಾರರು ಈಡೇರಿಸಿದ್ದಾರೆ. ಅದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದು ಕೃತಜ್ಞತೆ ಸಲ್ಲಿಸಿದರು. ಆದರೆ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸದಂತೆ ಇರಲು ನಿರ್ಧರಿಸಿದ್ದೇನೆ. ಹೊಸಬರಿಗೆ ಅವಕಾಶ ಕಲ್ಪಿಸುವ ಸಲುವಾಗಿ ಈ ನಿರ್ಣಯ ಕೈಗೊಂಡಿದ್ದೇನೆ. ಇದರಲ್ಲಿ ಯಾವುದೇ ಸ್ವಹಿತಾಸಕ್ತಿ ಇಲ್ಲ. ಹೊಸ ಮುಖಗಳನ್ನು ರಾಜಕಾರಣಕ್ಕೆ ಪರಿಚಯಿಸುವ ತವಕ ನನ್ನಲ್ಲಿದೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವೆ ಎಂದರು.

ಇಂದು ಹೆಚ್ಚು ಓದಿದ್ದು

ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣ ಮಾತನಾಡಿದರು.

Nov 19, 2018 12:42pm

ಬೆಳಗಾವಿ: ಹಿಂಡಲಗಾ ಜೈಲಿನಲ್ಲಿ ಕೈದಿಗಳು ಸಮವಸ್ತ್ರ ತಯಾರಿಸುವ ಕೇಂದ್ರ.

Nov 19, 2018 05:29pm

ಧಾರವಾಡ: ಕೃಷಿ ವಿವಿಯ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ರವಿವಾರ ಹಮ್ಮಿಕೊಂಡಿದ್ದ ಶರೀಫರು ಮತ್ತು ಗೋವಿಂದ ಭಟ್ಟರ ತತ್ವಪದಗಳ ಆಧಾರಿತ 'ತತ್ವ ರಸಾಯನ' ಸಂಗೀತ-ನೃತ್ಯ ಕಾರ್ಯಕ್ರಮವನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಉದ್ಘಾಟಿಸಿದರು.

Nov 19, 2018 05:11pm

Trending videos

Back to Top