ರಮೇಶ್ ಮನವೊಲಿಕೆಗೆ ಪ್ರಯತ್ನಿಸಿದ ಸುರೇಶ್
Team Udayavani, Sep 6, 2018, 6:35 AM IST
ಬೆಂಗಳೂರು: ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮೂಗು ತೂರಿಸಿದರೆ ತಮ್ಮ ದಾರಿ ತಾವು ನೋಡಿಕೊಳ್ಳುವ ಎಚ್ಚರಿಕೆ ನೀಡಿರುವ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಸಂಸದ ಹಾಗೂ ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್, ರಮೇಶ್ ಜಾರಕಿಹೊಳಿ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯಾವುದೇ ಕಾರಣಕ್ಕೂ ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ಬಗ್ಗೆ ಯಾವುದೇ ರೀತಿಯ ಗೊಂದಲ ಸೃಷ್ಟಿಯಾಗುವುದು ಬೇಡ ಎಂದು ಮನವಿ ಮಾಡಿದ್ದಾರೆಂದು ತಿಳಿದು ಬಂದಿದೆ.
ಬೆಳಗಾವಿ ಪಿಎಲ್ಡಿ ಬ್ಯಾಂಕಿನ ಚುನಾವಣೆ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ. ಲಕ್ಷ್ಮೀ ಹೆಬ್ಟಾಳ್ಕರ್ ಅವರು ಡಿ.ಕೆ. ಶಿವಕುಮಾರ್ ಆಪ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದು, ಅವರು ತಮ್ಮ ವಿರುದ್ಧ ತಿರುಗಿ ಬೀಳಲು ಶಿವಕುಮಾರ್ ಅವರೇ ಕಾರಣ ಎಂದು ರಮೇಶ್ ಜಾರಕಿಹೊಳಿ ಭಾವಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಜಾರಕಿಹೊಳಿ ಸಹೋದರರು ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಮ್ಮಿಶ್ರ ಸರ್ಕಾರಕ್ಕೂ ಕಂಟಕವಾಗುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಡಿ.ಕೆ.ಶಿವಕುಮಾರ್, ಸಹೋದರನ ಮೂಲಕ ರಮೇಶ್ ಜಾರಕಿಹೊಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.
ತಮ್ಮ ಸಹೋದರ ಯಾವುದೇ ರೀತಿಯ ಹಸ್ತಕ್ಷೇಪ ಮಾಡದಿದ್ದರೂ ಅನಗತ್ಯವಾಗಿ ಗೊಂದಲ ಸೃಷ್ಟಿಸಲಾಗುತ್ತಿದೆ. ತಾವು ಆತುರದ ನಿರ್ಧಾರ ತೆಗೆದುಕೊಳ್ಳುವುದರಿಂದ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಯಾವುದೇ ರೀತಿಯ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಡಿ.ಕೆ.ಸುರೇಶ್ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!