CONNECT WITH US  

ಚಿಕ್ಕಮಗಳೂರಿನಿಂದ ಇಂದು ಕಾಂಗ್ರೆಸ್‌ ಪ್ರತಿಭಟನೆ 

ಬೆಂಗಳೂರು: ಕೇಂದ್ರದ ಎನ್‌ಡಿಎ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಶುಕ್ರವಾರದಿಂದ ಸೆ.16 ರವರೆಗೂ ಕಾಂಗ್ರೆಸ್‌ನಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ. ಆರ್‌.ಸುದರ್ಶನ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ನೋಟು ಅಮಾನ್ಯಿàಕರಣ ಮಾಡಿ ಕಪ್ಪು ಹಣ ವಾಪಸ್‌ ತರುತ್ತೇವೆ ಎಂದು ದೇಶದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದೆ. ಇದರಿಂದ ರೈತರು, ಮಹಿಳೆಯರು,
ಕಾರ್ಮಿಕರು ತೊಂದರೆಗೊಳಗಾಗಿದ್ದಾರೆ. ಕೇಂದ್ರದ ತಪ್ಪು ನಿರ್ಧಾರಗಳ ವಿರುದ್ಧ ಶುಕ್ರವಾರ ಚಿಕ್ಕಮಗಳೂರಿನಿಂದ ಪ್ರತಿಭಟನೆ ಆರಂಭಿಸಲಾಗುವುದು ಎಂದರು.

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ, ಮಾಸಾಂತ್ಯದಲ್ಲಿ ಬೆಂಗಳೂರಿನಲ್ಲಿ ಬೃಹತ್‌
ಪ್ರತಿಭಟನಾ ಸಭೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜನ ವಿರೋಧಿ ನೀತಿ ಅನುಸರಿಸಿ ಸಾಮಾನ್ಯ ಜನರನ್ನು
ಕತ್ತಲೆಯಲ್ಲಿಡುವ ಕೆಲಸ ಮಾಡಿದೆ. ಆರ್ಥಿಕವಾಗಿ ದೇಶವನ್ನು ಸದೃಢವಾಗಿಡುವಲ್ಲಿ ವಿಫ‌ಲವಾಗಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

Trending videos

Back to Top