CONNECT WITH US  

ಆಪರೇಷನ್‌ ಕಮಲಕ್ಕೆ ಅವಕಾಶ ನೀಡುವುದಿಲ್ಲ: ಎಂ.ಬಿ.ಪಾಟೀಲ

ವಿಜಯಪುರ: "ಆಪರೇಷನ್‌ ಕಮಲ'ದ ಮೂಲಕ ರಾಜ್ಯದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ನಾಯಕರು ಕಾಣುತ್ತಿರುವ ಕನಸು ನನಸಾಗುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಎಸೆಯುವ ಯಾವ ದಾಳಕ್ಕೂ ಕಾಂಗ್ರೆಸ್‌-ಜೆಡಿಎಸ್‌ ಶಾಸಕರು ಬಲಿಯಾಗುವುದಿಲ್ಲ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ಆಪರೇಷನ್‌ ಕಮಲ ನಡೆಯಲು ಅವಕಾಶ ನೀಡುವುದಿಲ್ಲ. ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ದಿನಕ್ಕೊಂದು ಹೇಳಿಕೆ ನೀಡುತ್ತಾರೆ, ಅವರು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯೆ ನೀಡಲಾರೆ. ನನ್ನ ಮರ್ಜಿಯಿಂದ ಅವರು ಮಾತನಾಡುವ ಅಗತ್ಯವೂ ಇಲ್ಲ ಎಂದರು.

ಸಿದ್ದರಾಮಯ್ಯ ಅವರು ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡಬಾರದೆಂಬ ದುರುದ್ದೇಶದಿಂದ ವಿದೇಶ ಪ್ರವಾಸ ಕೈಗೊಂಡಿಲ್ಲ. ಈ ಪ್ರವಾಸ 2 ತಿಂಗಳ ಮೊದಲೇ ನಿರ್ಧಾರವಾಗಿತ್ತು. ತಮ್ಮ ಒಂದು ಮತ ತಪ್ಪಿದರೇನಾಯ್ತು, ನೂರು ಮತ ಹಾಕಿಸಿ ಸುನೀಲಗೌಡ ಅವರನ್ನು ಗೆಲ್ಲಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.  ಜೆಡಿಎಸ್‌ ಬೆಂಬಲಿತ ಕಾಂಗ್ರೆಸ್‌ ಅಭ್ಯರ್ಥಿ ಸುನೀಲಗೌಡ ಗೆಲುವು ನಿಶ್ಚಿತ.
-  ಎಂ.ಬಿ.ಪಾಟೀಲ, ಮಾಜಿ ಸಚಿವ


Trending videos

Back to Top