CONNECT WITH US  

ಕೆಪಿಸಿಸಿ ಹೀನಾಯ ಸ್ಥಿತಿ ತಲುಪಿದೆ: ಈಶ್ವರಪ್ಪ

ಶಿವಮೊಗ್ಗ: "ಕರ್ನಾಟಕ ಪ್ರದೇಶ ಕಾಂಗ್ರೆಸ್‌ನಲ್ಲಿ ಆಗಿರುವ ಗೊಂದಲ ಗಮನಿಸಿದರೆ ಆ ಪಕ್ಷ ಹೀನಾಯ ಸ್ಥಿತಿಗೆ
ತಲುಪಿರುವುದು ಕಂಡು ಬರುತ್ತಿದೆ'ಎಂದು ಶಾಸಕ ಕೆ. ಎಸ್‌. ಈಶ್ವರಪ್ಪ ಲೇವಡಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನ ಆಂತರಿಕ ವಿಷಯಕ್ಕೆ ನಾವು ತಲೆ ಹಾಕುವುದಿಲ್ಲ. ಆದರೆ, ಕೆಪಿಸಿಸಿ
ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಆದೇಶಕ್ಕೆ ಪಕ್ಷದಲ್ಲೇ ಬೆಲೆ ಇಲ್ಲದಂತಾಗಿದೆ. ರಾಷ್ಟ್ರೀಯ ಪಕ್ಷ ಇಂತಹ ಹೀನಾಯ
ಸ್ಥಿತಿಗೆ ಬರಬಾರದಿತ್ತು ಎಂದರು. 

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ. ಒಬ್ಬರ ಮುಖ ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ. ಇದನ್ನು ಮುಚ್ಚಿ ಹಾಕಲು ಬಿ.ಎಸ್‌.ಯಡಿಯೂರಪ್ಪ ಹಾಗೂ ಅವರ ಮಕ್ಕಳ ಹೆಸರನ್ನು ತಂದು ರಾಜಕಾರಣ ಮಾಡುತ್ತಿದ್ದಾರೆ. ಯಡಿಯೂರಪ್ಪ ಪುತ್ರರು ಐಟಿ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ ಎಂಬುದಕ್ಕೆ
ದಾಖಲೆ ಇದ್ದರೆ ನೀಡಲಿ. ಪ್ರಕರಣವನ್ನು ಸಿಬಿಐಗೆ ವಹಿಸಲಿ. ಅದು ಬಿಟ್ಟು ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.

ಇಂದು ಹೆಚ್ಚು ಓದಿದ್ದು

ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಬಂಧಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ.

Nov 19, 2018 06:00am

ಬಾಗಲಕೋಟೆಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಬೆಂಕಿಗೆ ಆಹುತಿ.

Nov 19, 2018 06:00am

Trending videos

Back to Top