CONNECT WITH US  

ಭಿನ್ನಮತವಿಲ್ಲ: ಖಂಡ್ರೆ

ಸಾಂದರ್ಭಿಕ ಚಿತ್ರ.

ಬೆಳಗಾವಿ: "ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯಿಂದ ಸಮ್ಮಿಶ್ರ ಸರ್ಕಾರದ ಮೇಲೆ ಯಾವುದೇ ಪರಿಣಾಮ ಉಂಟಾಗದು. ಸರ್ಕಾರ ಸುಭದ್ರವಾಗಿದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್‌ ವರಿಷ್ಠರ ಸೂಚನೆ ಮೇರೆಗೆ ಇಲ್ಲಿಗೆ ಬಂದಿದ್ದು, ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದೆ. ನಂತರ, ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್‌ ಅವರೊಂದಿಗೆ ಪ್ರತ್ಯೇಕ ಸಮಾಲೋಚನೆ ನಡೆಸಲಾಯಿತು. ಮಾತುಕತೆ ಸೌಹಾರ್ದಯುತವಾಗಿ ಮುಕ್ತಾಯವಾಗಿದೆ.

ಇಬ್ಬರಲ್ಲೂ ಮನಸ್ತಾಪ ಇಲ್ಲ. ಈ ಚುನಾವಣೆ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಆದರೆ,
ಸುದ್ದಿಗೋಷ್ಠಿ ವೇಳೆ ಉಪಸ್ಥಿತರಿದ್ದ ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಟಾಳ್ಕರ್‌ ಒಮ್ಮೆಯೂ ಪರಸ್ಪರ ಮುಖ ನೋಡಲಿಲ್ಲ. ಬದಲಾಗಿ ಬೇರೆ ಕಡೆ ತಿರುಗಿ ಹೋಗಿದ್ದು ಭಿನ್ನಮತ ಶಮನವಾಗದಿರುವ ಸೂಚನೆ ನೀಡಿತು.

ಇಂದು ಹೆಚ್ಚು ಓದಿದ್ದು

ತುಮಕೂರಿನ ಹಳೆ ಸಿದ್ಧಗಂಗಾ ಮಠದ ಆವರಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್

Jan 18, 2019 06:50am

ರಾಜ್ಯ ಸರ್ಕಾರ ಪತನಗೊಳಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಆರೋಪಿಸಿ ಬೆಂಗಳೂರಿನಲ್ಲಿಮಾಜಿ ಸಚಿವ ಎಚ್‌.ಕೆ.ಪಾಟೀಲ್‌, ಜಯಮಾಲಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Jan 18, 2019 06:50am

Trending videos

Back to Top