CONNECT WITH US  

BSY ದಿಲ್ಲಿಯಿಂದ ವಾಪಾಸ್‌; ಪ್ರಮಾಣವಚನಕ್ಕೆ ಎಂದು CM ವ್ಯಂಗ್ಯ!

ಬೆಂಗಳೂರು : ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಗೆಂದು ದೆಹಲಿಗೆ ತೆರಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಧಿಡೀರ್‌ ವಾಪಾಸು ಬಂದಿರುವುದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.  

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪನವರು ಈ ಸರ್ಕಾರ ಬದಲಿಸಿ ಪ್ರಮಾಣವಚನ ಸ್ವೀಕರಿಸಲು ತುರ್ತಾಗಿ ಬಂದಿದ್ದಾರೆ ಎಂದರು. 

ಇದೇ ವೇಳೆ ನಿಮಗೆ ಗೊತ್ತಿದೆ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ನಿರಂತರವಾಗಿ ಪ್ರಯತ್ನಗಳು ಮುಂದುವರಿದಿವೆ ಎಂದರು. 

ತುರ್ತಾಗಿ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡುವ ಸಲುವಾಗಿ ಯಡಿಯೂರಪ್ಪ ಅವರು ಕಾರ್ಯಕಾರಿಣಿಯಲ್ಲಿ ಭಾಗಿಯಾಗದೆ ಬೆಂಗಳೂರಿಗೆ ವಾಪಾಸಾಗಿದ್ದಾರೆ ಎಂದು ತಿಳಿದು ಬಂದಿದೆ.

 ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಶನಿವಾರ ಮತ್ತು ಭಾನುವಾರ ನವದೆಹಲಿಯಲ್ಲಿ ನಡೆಯಲಿದೆ. 

Trending videos

Back to Top