ಸಚಿವ ಶಿವಕುಮಾರ್ ವಿರುದ್ಧ ಇಡಿ ಎಫ್ಐಆರ್?
Team Udayavani, Sep 9, 2018, 6:00 AM IST
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ ಸದ್ಯದಲ್ಲೇ ಎಫ್ಐಆರ್ ದಾಖಲಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದು, ದಾಖಲೆಗಳ ಪರಿಶೀಲನೆ ಕೂಡ ನಡೆಯುತ್ತಿದೆ. ಒಂದು ವೇಳೆ ಸೂಕ್ತ ಸಾಕ್ಷ್ಯಾಧಾರಗಳು ಪತ್ತೆಯಾದರೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗುವುದು ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.
2017ರಲ್ಲಿ ಸಚಿವ ಶಿವಕುಮಾರ್ ಹಾಗೂ ಇವರ ಆಪ್ತರ ಮನೆಗಳು ಮತ್ತು ಕಚೇರಿಗಳು ಸೇರಿ 60 ಕಡೆಗಳಲ್ಲಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವೇಳೆ ದೆಹಲಿಯಲ್ಲಿರುವ ಶಿವಕುಮಾರ್ಗೆ ಸೇರಿದ ಫ್ಲಾಟ್ಗಳ ಮೇಲೂ ದಾಳಿ ನಡೆಸಿದ್ದರು. ಈ ವೇಳೆ 8.59 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ವಿಚಾರಣೆಗೆ ಹಾಜರಾದ ಸಚಿವರು ಹಣದ ಮೂಲದ ಬಗ್ಗೆ ತಪ್ಪು ಮಾಹಿತಿ ನೀಡಿದ್ದರು.
ಬಳಿಕ ಮನೆಗಳಲ್ಲಿ ಸಿಕ್ಕ ದಾಖಲೆಗಳು ಹಾಗೂ ಸಚಿವರ ಹೇಳಿಕೆಗೂ ವ್ಯತ್ಯಾಸ ಕಂಡ ಬಂದ ಬೆನ್ನಲ್ಲೇ ಐಟಿ ಅಧಿಕಾರಿಗಳು ಬೆಂಗಳೂರಿನ ಆರ್ಥಿಕ ಅಪರಾಧ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಶಿವಕುಮಾರ್ ತಮ್ಮ ಆಪ್ತರ ಮೂಲಕ ಹವಾಲ ಹಣವನ್ನು ಪಕ್ಷಕ್ಕೆ ನೀಡುತ್ತಿದ್ದಾರೆ. ಜತೆಗೆ ಸುಳ್ಳು ಮಾಹಿತಿ ನೀಡಿದ್ದಾರೆ. ವಿದೇಶದಲ್ಲಿಯೂ ಕಪ್ಪು ಹಣ ಹೂಡಿಕೆ ಮಾಡಿದ್ದಾರೆ ಎಂದು ಗಂಭೀರ ಆರೋಪಿಸಿ ಪ್ರಕರಣ ದಾಖಲಿಸಿದ್ದರು. ಇದರ ಬೆನ್ನಲ್ಲೇ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಐಟಿ ಅಧಿಕಾರಿಗಳು ಸಂಪೂರ್ಣ ಮಾಹಿತಿ ರವಾನೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ