CONNECT WITH US  

ಸಮ್ಮಿಶ್ರ ಸರ್ಕಾರ ಬಿದ್ದರೆ ಬಿಜೆಪಿ ಸುಮ್ಮನೆ ಕೂರಲ್ಲ

ಬಳ್ಳಾರಿ: ಕಾಂಗ್ರೆಸ್‌-ಜೆಡಿಎಸ್‌ ಪಕ್ಷಗಳಲ್ಲೇ ಸಾಕಷ್ಟು ಸಮಸ್ಯೆಗಳಿವೆ. ಒಂದು ವೇಳೆ, ದೋಸ್ತಿಯಲ್ಲಿ ಕಿರಿಕ್‌ ಉಂಟಾಗಿ ಸರ್ಕಾರ ಬಿದ್ದರೆ, ಬಿಜೆಪಿ ಸುಮ್ಮನೆ ಕೂರಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡಿಮೆ ಸ್ಥಾನಗಳನ್ನು ಹೊಂದಿದ್ದರೂ ಅಧಿ ಕಾರಕ್ಕಾಗಿ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಸಮ್ಮಿಶ್ರ ಸರ್ಕಾರ ರಚಿಸಿವೆ. ಈ ಸರ್ಕಾರ ಬಿದ್ದರೆ, 104 ಶಾಸಕರ ಬಲವಿರುವ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಲಿದೆ ಎಂದರು. ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಯಾವುದೇ ತೊಂದರೆ ಕೊಡುತ್ತಿಲ್ಲ. ಆದರೆ, ಕಾಂಗ್ರೆಸ್‌-ಜೆಡಿಎಸ್‌ ನಾಯಕರು ಪರಸ್ಪರ ಕಚ್ಚಾಟಕ್ಕೆ ಇಳಿದಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯತ್ತ ಗಮನ ಹರಿಸಿರುವ ಬಿಜೆಪಿ ರಾಜ್ಯ ಸರ್ಕಾರದ ವಿಚಾರದಲ್ಲಿ ಶಾಂತವಾಗಿದೆ ಎಂದರು.


Trending videos

Back to Top