CONNECT WITH US  

ಬಂದ್‌ಗೆ ಜೆಡಿಎಸ್‌ ಬೆಂಬಲ 

ಹಾಸನ: ಭಾರತ್‌ ಬಂದ್‌ಗೆ ಜೆಡಿಎಸ್‌ನ ಸಂಪೂರ್ಣ ಬೆಂಬಲವಿದೆ ಎಂದು ಪಕ್ಷದ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ದರ ಏರಿಕೆಯಿಂದ ಜನ ಸಾಮಾನ್ಯರಿಗೆ ಭಾರೀ ಪೆಟ್ಟು ಬಿದ್ದಿದೆ. ಹಾಗಾಗಿ, ದೇಶದ ಹಲವು ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್‌ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ. ಜೆಡಿಎಸ್‌ ಕೂಡ ಸಂಪೂರ್ಣ ಬೆಂಬಲ ಘೋಷಿಸಿದೆ ಎಂದರು.

ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ಕೋರಿ ಸೆ.10ರಂದು ಮುಖ್ಯಮಂತ್ರಿಯವರ ನೇತೃತ್ವದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿ ಅವರನ್ನು ಭೇಟಿಯಾಗಲು ದೆಹಲಿಗೆ ಹೋಗುತ್ತಿದೆ. ತಾವೂ ಕೂಡ
ನಿಯೋಗದಲ್ಲಿ ಹೋಗುತ್ತಿದ್ದು, ತೈಲ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ನೇರವಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಪಕ್ಷದ ಕಾರ್ಯಕತರು ಪ್ರತಿಭಟನೆ ನಡೆಸಲಿದ್ದಾರೆ ಎಂದರು.


Trending videos

Back to Top