CONNECT WITH US  

ಪರಂ ವಿದೇಶ ಪ್ರವಾಸಕ್ಕೆ ಬ್ರೇಕ್‌

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಿಂಚಿನ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರ ವಿದೇಶ ಪ್ರವಾಸಕ್ಕೆ ಹೈಕಮಾಂಡ್‌ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌ ಹಾಕಿದೆ.

ಹವಾಮಾನ ವೈಪರೀತ್ಯದ ಕುರಿತು ಅಮೇರಿಕಾದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿ ನಡೆಯುವ ಮೂರು ದಿನಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಮಂಗಳವಾರ ತೆರಳಲು ಸಿದ್ಧತೆ ಮಾಡಿಕೊಂಡಿದ್ದ ಪರಮೇಶ್ವರ್‌ಗೆ ಹೈಕಮಾಂಡ್‌ ದಿಢೀರ್‌ ಪ್ರವಾಸಕ್ಕೆ ಬ್ರೇಕ್‌ ಹಾಕಿದೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಅಪಸ್ವರಗಳು ಕೇಳಿ ಬರುತ್ತಿದ್ದು,ಜಾರಕಿಹೊಳಿ ಸಹೋದರರು ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಅಲ್ಲದೇ ಬಿಜೆಪಿ ಕೂಡ ಕಾಂಗ್ರೆಸ್‌ ಶಾಸಕರನ್ನು ಆಪರೇಶನ್‌ ಕಮಲ ಮಾಡಲು ಪ್ರಯತ್ನ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಅಲ್ಲದೇ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಇಂತ ಸಂದರ್ಭದಲ್ಲಿ ಪಕ್ಷದ ಶಾಸಕರೊಂದಿಗೆ ಸಂಪರ್ಕದಲ್ಲಿರುವುದು ಅತ್ಯಂತ ಮಹತ್ವದ್ದಾಗಿದೆ. ಇನ್ನೊಂದೆಡೆ ಸಚಿವ ಡಿ.ಕೆ. ಶಿವಕುಮಾರ್‌ಗೆ ಬಂಧನದ ಭೀತಿ ಇರುವುದರಿಂದ ವಿದೇಶ ಪ್ರವಾಸಕೈಗೊಳ್ಳುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ಪ್ರವಾಸಕ್ಕೆ ತಡೆಯೊಡ್ಡಿದೆ ಎಂದು ಹೇಳಲಾಗುತ್ತಿದೆ.

Trending videos

Back to Top