CONNECT WITH US  

ಐಟಿ-ಇಡಿ ಮೂಲಕ ಕಾಂಗ್ರೆಸ್‌ ಮಣಿಸಲು ಆಗಲ್ಲ

ಬಾಗಲಕೋಟೆ: ಪ್ರಧಾನಿ ಮೋದಿ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದಂತಹ ಸ್ವಾಯತ್ತತೆ ಇಲಾಖೆಗಳನ್ನು  ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್‌ ಮಣಿಸಲು ಸಂಚು ಮಾಡುತ್ತಿದ್ದಾರೆ. ಇದು ಎಂದಿಗೂ ಸಾಧ್ಯವಿಲ್ಲ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಭಾರತ ಬಂದ್‌ ಹಿನ್ನೆಲೆಯಲ್ಲಿ ಬಸವೇಶ್ವರ ವೃತ್ತದಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಕಾಂಗ್ರೆಸ್‌ ಎದುರು ಮೋದಿ ಯಾವ ಗಿಡದ ತಪ್ಪಲು? ಕಾಂಗ್ರೆಸ್‌ನ ನೈತಿಕ ಸ್ಥೈರ್ಯ ಕುಗ್ಗಿಸುವ ಸಂಚು ಬಿಜೆಪಿ ಹಾಗೂ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಮೋದಿ ಎಷ್ಟು ಬೇಗ ಅಧಿಕಾರದಿಂದ ಕೆಳಗೆ ಇಳಿಯುತ್ತಾರೋ ಅಷ್ಟು ಬೇಗ ಇಡೀ ದೇಶಕ್ಕೆ ಒಳ್ಳೆಯದಾಗುತ್ತದೆ ಎಂದರು.

Trending videos

Back to Top