CONNECT WITH US  

ಜನರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್‌

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಮುಳುಗುತ್ತಿರುವ ಕಾಂಗ್ರೆಸ್‌ ಹಡಗನ್ನು ರಕ್ಷಿಸಲು ಕಾಂಗ್ರೆಸ್‌ ನಾಯಕರು ನಿರಂತರವಾಗಿ ಅರ್ಧ ಸತ್ಯ  ಹೇಳುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಆರೋಪಿಸಿದ್ದಾರೆ.

ತೈಲ ಬೆಲೆ ಏರಿಕೆ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಜನರ ದಾರಿ ತಪ್ಪಿಸುತ್ತಿದ್ದು ಭಾರತ್‌ ಬಂದ್‌ ಕೂಡ ಇದರ ಒಂದು ಭಾಗ ಎಂದು ಹೇಳಿದ್ದಾರೆ. ಪ್ರತಿ ಲೀಟರ್‌ ಪೆಟ್ರೋಲ್‌ನಿಂದ ಕೇಂದ್ರ ಸರ್ಕಾರಕ್ಕೆ 6.66 ರೂ. ದೊರೆಯಲಿದ್ದು ರಾಜ್ಯ ಸರ್ಕಾರಕ್ಕೆ 25 ರೂ. ದೊರೆಯಲಿದೆ. ತೆರಿಗೆ ಇಳಿಕೆ ಮಾಡುವುದು ರಾಜ್ಯ ಸರ್ಕಾರದ ಕರ್ತವ್ಯವಲ್ಲವೇ ಎಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ನಿಗದಿಯಾಗುತ್ತದೆ. ಯುಪಿಎ ಸರ್ಕಾರ ಇದ್ದಾಗಲೇ ತೈಲ ಬೆಲೆಗಳ ಮೇಲಿನ ಸರ್ಕಾರದ ನಿಯಂತ್ರಣವನ್ನು ತೆಗೆದು ಹಾಕಲಾಗಿದೆ. ಈ ಅಂಶ ಕಾಂಗ್ರೆಸ್‌ ಮುಖಂಡರು ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಂದ ಮುಚ್ಚಿಡುವ ಕುತಂತ್ರ ಮಾಡುತ್ತಿದೆ ಎಂದು ದೂರಿದ್ದಾರೆ.

Trending videos

Back to Top