CONNECT WITH US  

22 ವರ್ಷ ಬಳಿಕ ಖರ್ಗೆ ಪ್ರತಿಭಟನೆ!

ಕಲಬುರಗಿ: ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬರೋಬ್ಬರಿ 22 ವರ್ಷಗಳ ಬಳಿಕ ಸಾರ್ವಜನಿಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಸೋಮವಾರ ತೈಲ ಬೆಲೆ ಹೆಚ್ಚಳ ವಿರೋಧಿಸಿ ಕೇಂದ್ರದ ವಿರುದ್ಧ ಕರೆ ನೀಡಿದ್ದ ಬಂದ್‌ ವೇಳೆ ಭಾಗವಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್‌ಡಿಎ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 22 ವರ್ಷಗಳ ಹಿಂದೆ ಅಂದರೆ ಜೆ.ಎಚ್‌.ಪಟೇಲ್‌ ಮುಖ್ಯಮಂತ್ರಿ ಆಗಿದ್ದ ವೇಳೆ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆ ವೇಳೆ ಭಾಗಿಯಾಗಿದ್ದು ಬಿಟ್ಟರೆ ಇದುವರೆಗೂ ಸಾರ್ವಜನಿಕ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿರಲಿಲ್ಲ.


Trending videos

Back to Top