ದೇವರಾಣೆ ನಾವು ಪಕ್ಷ ಬಿಡುತ್ತಿಲ್ಲ:ಶಾಸಕರ ಅಳಲು
Team Udayavani, Sep 12, 2018, 6:00 AM IST
ಬೆಂಗಳೂರು: ಜಾರಕಿಹೊಳಿ ಸಹೋದರರೊಂದಿಗೆ ಕಾಂಗ್ರೆಸ್ ತೊರೆದು ಆಪರೇಷನ್ ಕಮಲಕ್ಕೆ ಒಳಗಾಗಿ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಅನೇಕ ಶಾಸಕರು ಕೆಪಿಸಿಸಿ ಅಧ್ಯಕ್ಷರು ಹಾಗೂ ಕಾರ್ಯಾಧ್ಯಕ್ಷರಿಗೆ ದೂರವಾಣಿ ಕರೆ ಮಾಡಿ, ತಾವು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ.
ಬಿಜೆಪಿಯವರು ಅನಗತ್ಯವಾಗಿ ತಮ್ಮ ಹೆಸರನ್ನು ಸೇರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ನೇರವಾಗಿ ಪಕ್ಷದ ನಾಯಕರಿಗೆ ತಾವು ಪಕ್ಷ ತೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದರೆ, ಶಾಸಕರಾದ ಅಮರೇಗೌಡ ಬಯ್ನಾಪುರ, ರಹೀಂಖಾನ್, ಎಂ.ಟಿ.ಬಿ.ನಾಗರಾಜ್. ಬಿ.ನಾರಾಯಣರಾವ್, ತುಕಾರಾಂ, ಮಹೇಶ್ ಕವಟಹಳ್ಳಿ,
ಸೀಮಂತ್ ಪಾಟೀಲ್, ಬಸವನಗೌಡ, ಡಿ.ಎಸ್. ಹುಲಗೇರಿಯವರು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ಗೆ ದೂರವಾಣಿ ಕರೆ ಮಾಡಿ ತಾವು
ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಮುಳಬಾಗಿಲು ಶಾಸಕ ನಾಗೇಶ್ ಕೂಡ ತಮ್ಮ ಹೆಸರು ಆಪರೇಷನ್ ಕಮಲದ ಶಾಸಕರ ಪಟ್ಟಿಯಲ್ಲಿ ಕೇಳಿ ಬರುತ್ತಿರುವುದನ್ನು ಕಂಡು ತಕ್ಷಣ ಸಚಿವ ಡಿ.ಕೆ.ಶಿವಕುಮಾರ್ಗೆ ಕರೆ ಮಾಡಿ, ತಾವು ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಒಳಗಾಗುತ್ತಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ