ಅನಿವಾಸಿ ಭಾರತೀಯರು, ಕನ್ನಡಿಗರಿಗೆ ಹೂಡಿಕೆಗೆ ಆಹ್ವಾನ

Team Udayavani, Sep 12, 2018, 6:00 AM IST

16.jpg

ಬೆಂಗಳೂರು: ಅನಿವಾಸಿ ಭಾರತೀಯರು ಹಾಗೂ ಅನಿವಾಸಿ ಕನ್ನಡಿಗರು ರಾಜ್ಯದಲ್ಲಿ ಹೂಡಿಕೆ ಮಾಡಲು ಉತ್ತೇಜಿಸುವುದು ಹಾಗೂ ಅವರು ಕೈಗಾರಿಕೆ ಸ್ಥಾಪನೆಗೆ ಮುಂದಾದರೆ ಅಗತ್ಯ ಸಹಕಾರ ನೀಡುವ ಸಲುವಾಗಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಅನಿವಾಸಿ ಭಾರತೀಯ ವೇದಿಕೆ ಕಲ್ಪಿಸಲು ಮುಂದಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಫ್ಕೆಸಿಸಿಐ ಅಧ್ಯಕ್ಷ ಸುಧಾಕರ್‌ ಎಸ್‌. ಶೆಟ್ಟಿ, ವಿದೇಶಗಳಲ್ಲಿರುವ ಭಾರತೀಯರು, ಕನ್ನಡಿಗರನ್ನು 
ಸಂಪರ್ಕಿಸಿ ಅವರು ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಲು, ಉತ್ತೇಜಿಸಲು ಅನಿವಾಸಿ ಭಾರತೀಯರ ವೇದಿಕೆ ಆರಂಭಿಸಲಾಗಿದೆ. ಅದರಂತೆ ಇತ್ತೀಚೆಗೆ ಅಮೆರಿಕದ ನ್ಯೂಯಾರ್ಕ್‌, ಅಟ್ಲಾಂಟಾ, ದಲ್ಲಾಸ್‌ ಹಾಗೂ ಅಬಿದಾಬಿ, ಶಾರ್ಜಾ, ದುಬೈ ಪ್ರವಾಸ ಕೈಗೊಳ್ಳಲಾಗಿತ್ತು. ಅನಿವಾಸಿ ಭಾರತೀಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು.

ಮುಖ್ಯವಾಗಿ ರಾಜ್ಯದಲ್ಲಿ ಉದ್ದಿಮೆ ಸ್ಥಾಪನೆಗಾಗಿ ಈಕ್ವಿಟಿ ಫ‌ಂಡ್‌ ಹರಿದು ಬರುವಂತೆ ಮಾಡುವುದು. ರಾಜ್ಯದ ರೋಗಗ್ರಸ್ತ ಉದ್ದಿಮೆಗಳ ಪುನಶ್ಚೇತನಕ್ಕಾಗಿ ಹಣಕಾಸು ಪಾಲುದಾರಿಕೆಗೆ ಅವಕಾಶ ಕಲ್ಪಿಸುವುದು. ಅನಿವಾಸಿ ಭಾರತೀಯರ ಸಹಕಾರದೊಂದಿಗೆ ಜಂಟಿ ಹೂಡಿಕೆ ಯೋಜನೆ ಪ್ರಾರಂಭಿಸುವುದು ಸಂಸ್ಥೆಯ ಉದ್ದೇಶ. ಅದರಂತೆ ಆಯ್ದ ರಾಷ್ಟ್ರಗಳಲ್ಲಿ ಸಭೆ ನಡೆಸಲಾಗಿದ್ದು, ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.

ಅಮೆರಿಕದಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗ ಅಜಿತ್‌ ಶೆಟ್ಟಿ ಅವರ ನ್ಯೂಯಾರ್ಕ್‌ನ ಲಾಂಗ್‌ ಐಲ್ಯಾಂಡ್‌ನ‌ಲ್ಲಿನ ಗೃಹ ಕಚೇರಿಯಲ್ಲಿ ನಡೆದ
ಸಭೆಯಲ್ಲಿ 30 ಮಂದಿ ಕನ್ನಡಿಗರು ಪಾಲ್ಗೊಂಡಿದ್ದರು. ಸರ್ಕಾರಿ ಇಲಾಖೆಗಳು, ಹೂಡಿಕೆದಾರರು ಹಾಗೂ ಅಧಿಕಾರಿ ವರ್ಗದ ನಡುವೆ ಸಂಪರ್ಕ ಕೊಂಡಿಯಾಗಿ ಎನ್‌ಆರ್‌ಐ ವೇದಿಕೆ ಕಾರ್ಯ ನಿರ್ವಹಿಸುವುದಾಗಿಯೂ ತಿಳಿಸಲಾಗಿದ್ದು, ಹೂಡಿಕೆಗೆ ಆಸಕ್ತಿ ತೋರಿದ್ದಾರೆ ಎಂದು ಹೇಳಿದರು.

ದಲ್ಲಾಸ್‌ನ ವಾಣಿಜ್ಯೋದ್ಯಮ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಎರಡೂ ಸಂಸ್ಥೆಗಳು ಪರಸ್ಪರ ವ್ಯವಹಾರ ಅಭಿವೃದಿಟಛಿಗೆ
ಕೈಜೋಡಿಸುವ ಒಡಂಬಡಿಕೆ ಮಾಡಿಕೊಳ್ಳಲಾಯಿತು. ನಂತರ ಯುಎಇಯಲ್ಲಿರುವ ಎನ್‌ಎಂಸಿ ಹೆಲ್ತ್‌ಕೇರ್‌ ನ ಸ್ಥಾಪಕ ಅಧ್ಯಕ್ಷ ಬಿ.ಆರ್‌.ಶೆಟ್ಟಿ ಅವರೊಂದಿಗೂ ಸಭೆ ನಡೆಯಿತು. ಬಿ.ಆರ್‌.ಶೆಟ್ಟಿ ಅವರು ರಾಜ್ಯದಲ್ಲಿ ಹೂಡಿಕೆ ಜತೆಗೆ ಸಂಸ್ಥೆ ಆಯೋಜಿಸಲಿರುವ ಏಷಿಯನ್‌ ಸಮ್ಮಿಟ್‌ಗೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆಂದು ತಿಳಿಸಿದರು. 

ಶಾರ್ಜಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಅಬ್ದುಲ್ಲಾ ಸುಲ್ತಾನ್‌ ಅಲ್‌ ಓವಾಯಿಸ್‌ ಅವರನ್ನು ಭೇಟಿಯಾಗಿ ಚರ್ಚಿಸಲಾಯಿತು. ದುಬೈನಲ್ಲಿ ನಡೆದ
ಸಭೆಯಲ್ಲಿ ಪಾಲ್ಗೊಂಡಿದ್ದ 35 ಅನಿವಾಸಿ ಭಾರತೀಯರು, ಅನಿವಾಸಿ ಕನ್ನಡಿಗರನ್ನು ಹೂಡಿಕೆಗೆ ಆಹ್ವಾನಿಸಲಾಯಿತು. ಬೆಂಗಳೂರಿಗೆ ಬದಲಾಗಿ
ದ್ವಿತೀಯ ಹಾಗೂ ತೃತೀಯ ಹಂತದ ನಗರಗಳಲ್ಲಿ ಹೂಡಿಕೆಗೆ ಆಹ್ವಾನಿಸಲಾಗಿದೆ. ಒಟ್ಟು 56 ರಾಷ್ಟ್ರದ ಅನಿವಾಸಿ ಭಾರತೀಯರನ್ನು ಸಂಪರ್ಕಿಸುವ
ಗುರಿಯಿದ್ದು, ಜನವರಿ ಹೊತ್ತಿಗೆ 24 ದೇಶಗಳನ್ನು ತಲುಪುವ ವಿಶ್ವಾಸವಿದೆ ಎಂದು ಹೇಳಿದರು. ಎಫ್ ಕೆಸಿಸಿಐ ಹಿರಿಯ ಉಪಾಧ್ಯಕ್ಷ ಸಿ.ಆರ್‌.ಜನಾರ್ದನ್‌ ಇತರರು ಉಪಸ್ಥಿತರಿದ್ದರು.

ವಿಶ್ವೇಶ್ವರಯ್ಯ ಪ್ರಶಸ್ತಿಗೆ ಬಿ.ಆರ್‌. ಶೆಟ್ಟಿ ಆಯ್ಕೆ
ಎಫ್ಕೆಸಿಸಿಐ ನೀಡುವ ಸರ್‌ ಎಂ. ವಿಶ್ವೇಶ್ವರಯ್ಯ ಪ್ರಶಸ್ತಿಗೆ ಅನಿವಾಸಿ ಭಾರತೀಯ ಉದ್ಯಮಿ, ಯುಎಇಯಲ್ಲಿನ ಎನ್‌ಎಂಸಿ ಹೆಲ್ತ್‌ ಕೇರ್‌ನ ಸ್ಥಾಪಕ ಅಧ್ಯಕ್ಷ ಡಾ.ಬಿ.ಆರ್‌.ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸುಧಾಕರ್‌ ಎಸ್‌. ಶೆಟ್ಟಿ, ಸೆ.15ರಂದು ಸಂಸ್ಥಾಪಕರ ದಿನಾಚರಣೆ
ನಡೆಯಲಿದ್ದು ಆ ದಿನ ಸಂಜೆ 5 ಗಂಟೆಗೆ ಬಿ.ಆರ್‌. ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಇತರರು ಪಾಲ್ಗೊಳ್ಳಲಿದ್ದಾರೆ. ರಾಜ್ಯಸಭಾ ಸದಸ್ಯ ಡಾ.ಸುಬ್ರಮಣ್ಯನ್‌ ಸ್ವಾಮಿ, ಸರ್‌ ಎಂ.ವಿಶ್ವೇಶ್ವರಯ್ಯ ಸ್ಮಾರಕ ಉಪನ್ಯಾಸ ನೀಡಲಿದ್ದಾರೆ ಎಂದರು.

ಪ್ರಧಾನಿ ಮೋದಿ, ಮುಖ್ಯಮಂತ್ರಿಗೆ ಪತ್ರ
ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯಿಂದ ಸಾರ್ವಜನಿಕರು ಸೇರಿ ಕೈಗಾರಿಕೋದ್ಯಮಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ತೆರಿಗೆ ಆದಾಯ ಕಡಿತಗೊಳಿಸಿಕೊಂಡು ಪೆಟ್ರೋಲ್‌, ಡೀಸೆಲ್‌ ದರವನ್ನು 9ರಿಂದ 10 ರೂ. ಇಳಿಕೆ ಮಾಡುವಂತೆ ಪ್ರಧಾನಿ ಹಾಗೂ ಮುಖ್ಯಮಂತ್ರಿಗಳನ್ನು ಕೋರಿ ಪತ್ರ ಬರೆಯಲಾಗಿದೆ ಎಂದು ಎಫ್ಕೆಸಿಸಿಐ ಅಧ್ಯಕ್ಷರು ಹೇಳಿದರು.

ಟಾಪ್ ನ್ಯೂಸ್

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.