CONNECT WITH US  

ಶಾಲೆಗಳಲ್ಲಿ ಚಿತ್ರ ಪ್ರದರ್ಶನಕ್ಕೆ ಯೋಜನೆ

ಧಾರವಾಡ: "ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು' ಚಲನಚಿತ್ರವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ತೋರಿಸಿ, ಅವರಿಂದ ಒಪ್ಪಿಗೆ ಪಡೆದು, ರಾಜ್ಯದ ಎಲ್ಲ ಶಾಲೆಗಳಲ್ಲಿ ತೋರಿಸುವ ಯೋಜನೆ ಇದೆ ಎಂದು ಚಿತ್ರದ ನಿರ್ದೇಶಕ ರಿಷಬ್‌ ಶೆಟ್ಟಿ ಹೇಳಿದರು.

ನಗರದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಓದಿದವರು ಒಳ್ಳೆಯ ರ್‍ಯಾಂಕ್‌ ಪಡೆದು ನಾಡಿಗೆ ಶ್ರಮಿಸಿದ್ದಾರೆ. ಹೀಗಾಗಿ ಎಲ್ಲರ ಬಾಲ್ಯದ ನೈಜ ಘಟನೆಗಳನ್ನು ಇಟ್ಟುಕೊಂಡು ಚಿತ್ರ ನಿರ್ದೇಶಿಸಿದ್ದೇನೆ.

ಇದಲ್ಲದೇ ಕಾಸರಗೋಡು ಎಂಬುದನ್ನು ಉಪಕಥೆ ಆಗಿಟ್ಟುಕೊಂಡು ಕಾಸರಗೋಡು ಕರ್ನಾಟಕಕ್ಕೆ ಸೇರಿದ್ದು ಎಂಬುದನ್ನು ತೋರಿಸಲು ಶ್ರಮಿಸಿದ್ದೇನೆ. 2 ಕೋಟಿ ರೂ.ವೆಚ್ಚದಲ್ಲಿ ಚಿತ್ರ ನಿರ್ಮಿಸಲಾಗಿದ್ದು, ಈಗಾಗಲೇ ಚಿತ್ರ 10 ಕೋಟಿ ಗಳಿಸಿದೆ  ಎಂದರು.

Trending videos

Back to Top