CONNECT WITH US  

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತದ ಪರಿಚಲನೆ ಮತ್ತು ಕಡಿಮೆ ಒತ್ತಡದ ತಗ್ಗು (ಟ್ರಫ್) ಕಂಡುಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಆಯ್ದ ಭಾಗಗಳಲ್ಲಿ ಮೋಡಕವಿದ ಹಾಗೂ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ಇದೇ ವಾತಾವರಣ ಇನ್ನೂ ಎರಡು-ಮೂರು ದಿನಗಳು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ ತುಂಬಾ ಕಡಿಮೆಯಿದೆ. ಇಲ್ಲಿ ಕೆಲವೇ ಕೆಲವು ಭಾಗಗಳಲ್ಲಿ ಸಾಧಾರಣ ಮಳೆ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಟ್ರಫ್ ಉಂಟಾಗಿದ್ದರಿಂದ ಮೋಡಕವಿದ ವಾತಾವರಣ ಕಂಡುಬರುತ್ತಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸಿ.ಎಸ್‌. ಪಾಟೀಲ ಸ್ಪಷ್ಟಪಡಿಸಿದ್ದಾರೆ. 

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top