CONNECT WITH US  

ರಮೇಶ್‌ ಜಾರಕಿಹೊಳಿ ಪಕ್ಷ ಬಿಡಲ್ಲ

ಕಲಬುರಗಿ: ಸಚಿವ ರಮೇಶ ಜಾರಕಿಹೊಳಿ ಸ್ವಾಭಿಮಾನಿ. ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಅವರಿಗೆ ನೋವಾಗಿದ್ದರೆ ಮಾತನಾಡಿ ಸರಿಪಡಿಸಲಾಗುವುದು. ಆದರೆ, ಯಾವುದೇ ಕಾರಣಕ್ಕೂ ಅವರು ಪಕ್ಷ ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ ಜಾರಕಿಹೊಳಿ ಕಾಂಗ್ರೆಸ್‌ ಪಕ್ಷ ಕಟ್ಟಿ ಬೆಳೆಸಿದ್ದಾರೆ. ಪಕ್ಷವೂ ಅವರಿಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡುತ್ತ ಬಂದಿದೆ. ಹೀಗಾಗಿ ಅವರು ಪಕ್ಷಕ್ಕೆ ಹಾನಿಯಾಗುವ ಯಾವುದೇ ಕೆಲಸ ಮಾಡಲ್ಲ ಎಂಬ ವಿಶ್ವಾಸವಿದೆ.

ಇಬ್ಬರು ಸಹೋದರರೊಂದಿಗೆ ತಾನು ಮಾತಾಡುತ್ತೇನೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಬಿಜೆಪಿಯವರು ಅಧಿ ಕಾರಕ್ಕೆ ಬರುವ ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್‌ ಶಾ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ ಅಲ್ಲದೇ ಯಾರೇ ಬಂದರೂ ಕರ್ನಾಟಕ, ಕನ್ನಡಿಗರನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಇದಕ್ಕೆ ಕನ್ನಡಿಗರು ಆಸ್ಪದ ಕೊಡುವುದಿಲ್ಲ ಎಂದರು.


Trending videos

Back to Top