CONNECT WITH US  

"ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ'

ಮೈಸೂರು: "ನಮ್ಮ ಒಬ್ಬ ಶಾಸಕರನ್ನು ಬಿಜೆಪಿ ನಾಯಕರು ಸೆಳೆಯಲು ಪ್ರಯತ್ನಿಸಿದರೆ, ನಾವು ಸುಮ್ಮನೆ ಕೂರುವುದಿಲ್ಲ' ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೂ ರಾಜಕಾರಣ ಮಾಡಲು ಬರುತ್ತದೆ.  ನಮ್ಮ ಒಬ್ಬ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಜೆಡಿಎಸ್‌ ಶಾಸಕರು, ನಾಯಕರ ಶಕ್ತಿ ಏನೆಂದು ಬಿಜೆಪಿಯವರಿಗೆ ಗೊತ್ತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಭಿವೃಧಿœಯತ್ತ ಹೆಚ್ಚು ಗಮನ ವಹಿಸುತ್ತಿದೆ. ಹೀಗಿದ್ದರೂ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಲಿದೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ನಾವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾಗಿದ್ದರೂ, ಕೆಲವು ಬಿಜೆಪಿ ಮುಖಂಡರು ಇನ್ನೂ ಅಧಿಕಾರದ ಆಸೆ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ಕೆಲವು ಶಾಸಕರಿಗೆ ಇಲ್ಲಸಲ್ಲದ ಆಸೆ ತೋರಿಸಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದ ಜನತೆ ಈ ಮೊದಲು ಬಿಜೆಪಿಗೆ ಅಧಿಕಾರ ಕೊಟ್ಟಿದ್ದರು. ಇದೀಗ ನಮಗೆ ಕೆಲಸ ಮಾಡಲು ಬಿಡಿ ಎಂದರು.

ಇಂದು ಹೆಚ್ಚು ಓದಿದ್ದು

ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಂಬಂಧಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಸಚಿವ ರಮೇಶ ಜಾರಕಿಹೊಳಿ.

Nov 19, 2018 06:00am

ಬಾಗಲಕೋಟೆಯಲ್ಲಿ ಕಬ್ಬು ತುಂಬಿದ್ದ ಟ್ರ್ಯಾಕ್ಟರ್‌ ಬೆಂಕಿಗೆ ಆಹುತಿ.

Nov 19, 2018 06:00am

Trending videos

Back to Top