“ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’
Team Udayavani, Sep 13, 2018, 6:00 AM IST
ಮೈಸೂರು: “ನಮ್ಮ ಒಬ್ಬ ಶಾಸಕರನ್ನು ಬಿಜೆಪಿ ನಾಯಕರು ಸೆಳೆಯಲು ಪ್ರಯತ್ನಿಸಿದರೆ, ನಾವು ಸುಮ್ಮನೆ ಕೂರುವುದಿಲ್ಲ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ 10 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ನಮಗೂ ರಾಜಕಾರಣ ಮಾಡಲು ಬರುತ್ತದೆ. ನಮ್ಮ ಒಬ್ಬ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಜೆಡಿಎಸ್ ಶಾಸಕರು, ನಾಯಕರ ಶಕ್ತಿ ಏನೆಂದು ಬಿಜೆಪಿಯವರಿಗೆ ಗೊತ್ತಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಭಿವೃಧಿœಯತ್ತ ಹೆಚ್ಚು ಗಮನ ವಹಿಸುತ್ತಿದೆ. ಹೀಗಿದ್ದರೂ ಸಮ್ಮಿಶ್ರ ಸರ್ಕಾರ ಬಿದ್ದು ಹೋಗಲಿದೆ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ. ನಾವು ಅಧಿಕಾರಕ್ಕೆ ಬಂದು ನಾಲ್ಕು ತಿಂಗಳಾಗಿದ್ದರೂ, ಕೆಲವು ಬಿಜೆಪಿ ಮುಖಂಡರು ಇನ್ನೂ ಅಧಿಕಾರದ ಆಸೆ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ಕೆಲವು ಶಾಸಕರಿಗೆ ಇಲ್ಲಸಲ್ಲದ ಆಸೆ ತೋರಿಸಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡಲಾಗುತ್ತಿದೆ. ರಾಜ್ಯದ ಜನತೆ ಈ ಮೊದಲು ಬಿಜೆಪಿಗೆ ಅಧಿಕಾರ ಕೊಟ್ಟಿದ್ದರು. ಇದೀಗ ನಮಗೆ ಕೆಲಸ ಮಾಡಲು ಬಿಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ