ಡಿಕೆಶಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು
Team Udayavani, Sep 19, 2018, 6:00 AM IST
ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲಬುರಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಂಗಳವಾರ ಬೆಳಗ್ಗೆ ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸುತ್ತಿರುವಾಗ ವಿಮಾನದಲ್ಲಿ ನೀಡಿದ ಸಿದ್ಧಪಡಿಸಿದ ಆಹಾರ (ಸ್ಯಾಂಡ್ ವಿಚ್) ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗಿದೆ. ಅಲ್ಲಿಂದ ತಮ್ಮ ಬೆಂಗಳೂರಿನ ನಿವಾಸಕ್ಕೆ ಆಗಮಿಸಿ, ಬಳಿಕ,
ಸ್ವಕ್ಷೇತ್ರ ಕನಕಪುರದ ಪೂರ್ವ ನಿಗದಿತ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಹೊಟ್ಟೆ ನೋವು ಹೆಚ್ಚಾಗಿ, ಆರೋಗ್ಯದಲ್ಲಿ ತೀವ್ರ ಏರುಪೇರಾಯಿತು. ಹೀಗಾಗಿ, ತಮ್ಮ ಕನಕಪುರ ನಿವಾಸಕ್ಕೆ ತೆರಳಿ ವಿಶ್ರಾಂತಿ ಪಡೆದರು. ನಂತರ ಸಂಜೆ ಬೆಂಗಳೂರಿನ ನಿವಾಸಕ್ಕೆ ಆಗಮಿಸಿದ್ದು, ತಜ್ಞ ವೈದ್ಯರು
ಅವರ ನಿವಾಸಕ್ಕೆ ಆಗಮಿಸಿ ಚಿಕಿತ್ಸೆ ನೀಡಿದ್ದರು. ತೀವ್ರ ಬಳಲಿದಂತಾಗಿದ್ದರಿಂದ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರು. ಆದರೆ, ರಾತ್ರಿ ವೇಳೆ ಹೊಟ್ಟೆ ನೋವು ಹೆಚ್ಚಾದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್