ಸಿಎಂ ಎಚ್‌ಡಿಕೆ ವಿರುದ್ಧ ಬಿಜೆಪಿ ಸುದ್ದಿಗೋಷ್ಠಿ;ಹಲವು ಹಗರಣಗಳ ಆರೋಪ


Team Udayavani, Sep 20, 2018, 4:40 PM IST

2588.jpg

ಬೆಂಗಳೂರು: ಆಪರೇಷನ್‌ ಕಮಲ ನಡೆಸಲು ಯತ್ನಿಸುತ್ತಿದೆ ಎನ್ನುವ ಆರೋಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ದ ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಷನ್‌ ಪ್ರಕರಣದ ವಿಚಾರ ಎತ್ತಿದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ  ಬಿಜೆಪಿ ಸಮರ ಸಾರಿದ್ದು , ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ನಾಯಕರು ಹಲವು ಆರೋಪಗಳನ್ನು ನೆನಪಿಸಿ ಕೊಟ್ಟಿದ್ದಾರೆ. 

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ನಾಯಕರಾದ ಆರ್‌.ಅಶೋಕ್‌, ಬಿ.ಜೆ.ಪುಟ್ಟಸ್ವಾಮಿ, ಗೋವಿಂದ ಕಾರಜೋಳ ಮತ್ತು ಇತರ ಮುಖಂಡರು ಮುಖ್ಯಮಂತ್ರಿ ಎಚ್‌ಡಿಕೆ ಅವರ ವಿರುದ್ಧ ಕಿಡಿ ಕಾರಿದರು. 

ಚಿತ್ರದುರ್ಗದಲ್ಲಿ  80 ಹೆಕ್ಟೇರ್‌ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ಅವಕಾಶ ನೀಡಿದ ಪ್ರಕರಣದಲ್ಲಿ ಎಚ್‌ಡಿಕೆ ಜಾಮೀನು ಪಡೆದಿದ್ದಾರೆ. ಅದಿರು ಕಳ್ಳಸಾಗಾಣಿಕೆಗೆ ಭೂಗತ ಪಾತಕಿಯೊಂದಿಗೆ ನಂಟು ಹೊಂದಿದ್ದಾರೆ. ಥಣಿಸಂದ್ರ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದಾರೆ. 460 ಹೆಕ್ಟೇರ್‌ ಪ್ರದೇಶದಲ್ಲಿ ಆಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಕುಮಾರಸ್ವಾಮಿ ಜಾಮೀನು ಪಡೆದಿದ್ದಾರೆ. ಹಲವು ಆರೋಪಗಳು ಕುಮಾರಸ್ವಾಮಿ ಅವರ ಮೇಲಿದೆ ಎಂದು ನೆನಪಿಸಿ ಕೊಟ್ಟರು. 

ಮಾಜಿ ಸಚಿವ ಕಾಂಗ್ರೆಸ್‌ ನಾಯಕ ಎ ಮಂಜು ಆರೋಪಿಸಿರುವಂತೆ ಸಚಿವ ರೇವಣ್ಣ ಪುತ್ರ ಪ್ರಜ್ವಲ್‌ ಭೂ ಕಬಳಿಕೆ ಮಾಡಿರುವುದು ನಿಜ. 54 ಎಕರೆ ಭೂಮಿ ಪ್ರಜ್ವಲ್‌ ಹೆಸರಲ್ಲಿ ರಿಜಿಸ್ಟ್ರಾರ್‌ ಆಗಿದೆ ಎಂದು ಹೇಳಿದರು. 

ಸಿಎಂ ದಂಗೆ ಏಳಲು ಕರೆ ನೀಡಿದ್ದಾರೆ. ಈ ಕುರಿತು ಪೊಲೀಸರು ತಕ್ಷಣ ಸ್ವಯಂ ಪ್ರೇರಿತರಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು.ರಾಜ್ಯಪಾಲರು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.

ರಾಮನಗರದ ಕ್ಯಾತಗಾನಹಳ್ಳಿಯಲ್ಲಿ ಎಸ್‌ಸಿ/ಎಸ್‌ಟಿಗೆ ಮೀಸಲಾಗಿದ್ದ 46 ಎಕರೆ ಭೂಮಿಯನ್ನು ಎಚ್‌ಡಿಕೆ ಕುಟುಂಬ ಕಬಳಿಸಿದೆ. 

ಇಂದು ಕಾಂಗ್ರೆಸ್‌ನ ಕೆಲ ಗೂಂಡಾಗಳು ಯಡಿಯೂರಪ್ಪ ಅವರ ಮನೆಗೆ ನುಗ್ಗಿ ಅವರ ಪ್ರಾಣ ತೆಗೆಯಲು ಮುಂದಾಗಿದ್ದರು.ಇದು ಸರ್ಕಾರದ ಪ್ರೇರಣೆಯಿಂದ ನಡೆದಿದೆ ಎಂದು ಆರೋಪಿಸಿದರು. 

ಬಿಜೆಪಿ ಆಪರೇಷನ್‌ ಕಮಲಕ್ಕೆ ಯಾವುದೇ ಯತ್ನ ಮಾಡಿಲ್ಲ. ನಾವು ಯಾರನ್ನೂ ಕರೆದಿಲ್ಲ. ಕಾಂಗ್ರೆಸ್‌ ಶಾಸಕರೇ ಪಕ್ಷ ತೊರೆಯಲು ಮುಂದಾಗಿದ್ದಾರೆ ಎಂದರು. 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.