ಬಿಎಸ್ವೈಗೆ ದೈವಾನುಗ್ರಹವಿಲ್ಲ: ರೇವಣ್ಣ
Team Udayavani, Sep 22, 2018, 6:00 AM IST
ಹಾಸನ: ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಸರ್ಕಾರವನ್ನು ಉರುಳಿಸುವ ಪ್ರಯತ್ನವನ್ನು ಬಿಜೆಪಿ ಮುಖಂಡರು ಮಾಡುತ್ತಿದ್ದಾರೆ. ಆದರೆ ಏನೇ ಪ್ರಯತ್ನ ಮಾಡಿದರೂ ಅವರಿಂದ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದರು.
ಬಿಜೆಪಿ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಪತನವಾಗುತ್ತದೆ ಎಂಬುದು ಗಾಳಿ ಸುದ್ದಿ. ಬಿಜೆಪಿ ಸರ್ಕಾರ ರಚನೆಯ ಕನಸು ಕಾಣುತ್ತಿರುವ ಬಿ.ಎಸ್.ಯಡಿಯೂರಪ್ಪ ಅವರಿಗೆ ದೈವಾನುಗ್ರಹ ಇಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್- ಜೆಡಿಎಸ್ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚನೆಗೆ ಕೇಂದ್ರ ಸರ್ಕಾರದಿಂದ 300 ಕೋಟಿ ರೂ.ಗಳನ್ನು ರಾಜ್ಯದ ಬಿಜೆಪಿ ಮುಖಂಡರು ಪಡೆದುಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸರ್ಕಾರ ಉರುಳಿಸಲು 300 ಕೋಟಿ ರೂ. ಗಳನ್ನು ಕೇಂದ್ರ ಸರ್ಕಾರದಿಂದ ಪಡೆಯುವ ಬಿಜೆಪಿ ಮುಖಂಡರಿಗೆ ಕೊಡಗು ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದಾದ ಹಾನಿಗೆ ಕೇಂದ್ರ ಸರ್ಕಾರದಿಂದ ಅನುದಾನ ತರಲಾಗದಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ